ಭಾನುವಾರ, ಡಿಸೆಂಬರ್ 15, 2019
21 °C

ಸ್ನೇಹಿತನ ಪುತ್ರಿಗೆ ಅಶ್ಲೀಲ ಚಿತ್ರ, ಸಂದೇಶ ಕಳುಹಿಸಿದ ವ್ಯಕ್ತಿ ಬಂಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೈದರಾಬಾದ್: 40 ವರ್ಷ ವಯಸ್ಸಿನ ವ್ಯಕ್ತಿಯೊಬ್ಬ ತನ್ನ ಸ್ನೇಹಿತನ ಪುತ್ರಿಗೆ ಅಶ್ಲೀಲ ಚಿತ್ರಗಳನ್ನು ಕಳುಹಿಸಿ ಆರೋಪದ ಬಂಧಿತನಾಗಿದ್ದು ಆತನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿರುವ ಘಟನೆ ಹೈದರಾಬಾದ್ ನಡೆದಿದೆ.

ಸ್ನೇಹಿತನ ಮನೆಗೆ ಹೋಗಿದ್ದ ಆರೋಪಿ ಅಪ್ರಾಪ್ತ ಬಾಲಕಿಯ ಮೊಬೈಲ್ ನಂಬರ್ ಪಡೆದು ಆಕೆಯ ಮೊಬೈಲ್ ಅಶ್ಲೀಲ ಸಂದೇಶಗಳು ಹಾಗೂ ಚಿತ್ರಗಳನ್ನು ಕಳುಹಿಸಿದ್ದ ಎನ್ನಲಾಗಿದೆ. ಈ ಸಂಬಂಧ ಬಾಲಕಿಯ ತಂದೆ ಪೊಲೀಸರಿಗೆ ದೂರು ನೀಡಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಅನುಷ್ಠಾನದ ಸುತ್ತಮುತ್ತ...

ಪೊಲೀಸರು ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಈ ಸಮಯದಲ್ಲಿ ಆತನ ಮೊಬೈಲ್ ನಿಂದ ಬಾಲಕಿಗೆ ಸಂದೇಶಗಳು ಹಾಗೂ ಚಿತ್ರಗಳು ಕಳುಹಿಸಿರುವುದು ದೃಢಪಟ್ಟಿದೆ. ನಂತರ ಪೊಲೀಸರು ಆತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು