ನನ್ನ ಜೀವಮಾನದಲ್ಲಿ ಪ್ರತ್ಯೇಕ ರಾಜ್ಯ ಸಾಧ್ಯವಿಲ್ಲ: ದೇವೇಗೌಡ

7

ನನ್ನ ಜೀವಮಾನದಲ್ಲಿ ಪ್ರತ್ಯೇಕ ರಾಜ್ಯ ಸಾಧ್ಯವಿಲ್ಲ: ದೇವೇಗೌಡ

Published:
Updated:

ನವದೆಹಲಿ: ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ರಚನೆಯನ್ನು ವಿರೋಧಿಸಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ, ಬಿಜೆಪಿಯ ಪ್ರಚೋದನೆಗೆ ಒಳಗಾಗದಂತೆ ಉತ್ತರ ಕರ್ನಾಟಕದ ಜನರಲ್ಲಿ ಮನವಿ ಮಾಡಿದ್ದಾರೆ. ಪ್ರತ್ಯೇಕ ರಾಜ್ಯದ ಬೇಡಿಕೆ ತಮ್ಮ ಹಾಗೂ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರ ಜೀವಿತಾವಧಿವರೆಗೂ ಈಡೇರುವುದಿಲ್ಲ ಎಂದು ಹೇಳಿದ್ದಾರೆ. 

ದುರುದ್ದೇಶಪೂರಿತ ಪ್ರಚಾರವನ್ನು ನಡೆಸುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ವಿರುದ್ಧ ಅವರು ಹರಿಹಾಯ್ದಿದ್ದಾರೆ. ಹೆಚ್ಚು ಸ್ಥಾನ ಪಡೆದರೂ ಅಧಿಕಾರ ನಡೆಸಲು ಸಾಧ್ಯವಾಗದ್ದಕ್ಕೆ ಆವರಿಸಿಕೊಂಡಿರುವ ಅವರ ಕೋಪ ಇನ್ನೂ ತಣ್ಣಗಾಗಿಲ್ಲ ಎಂದು ದೇವೇಗೌಡ ಹೇಳಿದ್ದಾರೆ. 

ರೈತರ ಸಾಲಮನ್ನಾ, ಬಜೆಟ್ ಹಾಗೂ ಇತರೆ ವಿಷಯಗಳನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಅಶಾಂತಿ ನಿರ್ಮಿಸುತ್ತಿದ್ದಾರೆ ಎಂದು ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದಾರೆ. 

ಬರಹ ಇಷ್ಟವಾಯಿತೆ?

 • 7

  Happy
 • 2

  Amused
 • 1

  Sad
 • 1

  Frustrated
 • 2

  Angry

Comments:

0 comments

Write the first review for this !