ಗುರುವಾರ , ನವೆಂಬರ್ 21, 2019
26 °C

ಅನರ್ಹ ಶಾಸಕರ ಅರ್ಜಿ ವಿಚಾರಣೆ ಮತ್ತೆ ಮುಂದಕ್ಕೆ 

Published:
Updated:

ನವದೆಹಲಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಮಂದಿ ಅನರ್ಹ ಶಾಸಕರು ಸಲ್ಲಿಸಿರುವ ಮೇಲ್ಮನವಿಯ ವಿಚಾರಣೆ ಮತ್ತೊಂದು ದಿನ ಮುಂದಕ್ಕೆ ಹೋಗಿದೆ. ಹೀಗಾಗಿ ಪ್ರಕರಣದ ವಿಚಾರಣೆಯನ್ನು ಸುಪ್ರೀಂ ಕೋರ್ಟ್‌ ಅಕ್ಟೋಬರ್ 23ಕ್ಕೆ ನಿಗದಿಪಡಿಸಿದೆ.  

ಸೋಮವಾರ ಅರ್ಜಿಯ ವಿಚಾರಣೆ ಆರಂಭವಾಗುತ್ತಲೇ ಕಾಂಗ್ರೆಸ್ ಪರ ವಕೀಲ ಕಪಿಲ್ ಸಿಬಲ್ ಅವರು ವಿಚಾರಣೆಯನ್ನು ಮುಂದೂಡಬೇಕಾಗಿ ಮನವಿ ಮಾಡಿದರು. ಇದೇ ಮೇರೆಗೆ ಸುಪ್ರೀಂ ಕೋರ್ಟ್‌ ಬುಧವಾರಕ್ಕೆ ಅರ್ಜಿ ವಿಚಾರಣೆ ನಿಗದಿ ಮಾಡಿತು. 

ಶಾಸಕ ಸ್ಥಾನದಿಂದ ಅನರ್ಹಗೊಳಿಸಿರುವ ಸ್ಪೀಕರ್‌ ಆದೇಶವನ್ನು ಪ್ರಶ್ನಿಸಿ ಕಾಂಗ್ರೆಸ್‌ ಮತ್ತು ಜೆಡಿಎಸ್‌ನ 17 ಶಾಸಕರು ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. 

ಅನರ್ಹ ಶಾಸಕರ ಕ್ಷೇತ್ರಗಳಿಗೆ ಡಿ. 5ರಂದು ಚುನಾವಣೆ ನಡೆಯಲಿದೆ. 

ಚುನಾವಣೆ ನಡೆಯುವ ಕ್ಷೇತ್ರಗಳು

ಅಥಣಿ, ಕಾಗವಾಡ, ಗೋಕಾಕ, ಯಲ್ಲಾಪುರ, ಹಿರೇಕೆರೂರ, ರಾಣೆಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆ.ಆರ್. ಪುರ, ಯಶವಂತಪುರ, ಮಹಾಲಕ್ಷ್ಮಿ ಲೇಔಟ್‌, ಶಿವಾಜಿನಗರ, ಹೊಸಕೋಟೆ, ಕೆ.ಆರ್. ಪೇಟೆ, ಹುಣಸೂರು

ಪ್ರತಿಕ್ರಿಯಿಸಿ (+)