ಮಂಗಳವಾರ, ಮಾರ್ಚ್ 28, 2023
29 °C

ತನಿಖಾ ಸಮಿತಿಗೆ ಸಿಜೆಐ ಹಾಜರ್

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ (ಸಿಜೆಐ) ರಂಜನ್ ಗೊಗೊಯಿ, ತಮ್ಮ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಸಂಬಂಧ ಬುಧವಾರ ಆಂತರಿಕ ತನಿಖಾ ಸಮಿತಿ ಎದುರು ಹಾಜರಾದರು.

ಇಂತಹ ಪ್ರಕರಣದಲ್ಲಿ ಸಿಜೆಐ ಒಬ್ಬರು ತನಿಖಾ ಸಮಿತಿ ಎದುರು ಹಾಜರಾಗಿದ್ದು ದೇಶದ ನ್ಯಾಯಾಂಗ ಇತಿಹಾಸದಲ್ಲಿ ಇದೇ ಮೊದಲು ಎಂದು ಅಧಿಕೃತ ಮೂಲಗಳು ತಿಳಿಸಿವೆ. 

‘ತನಿಖಾ ಸಮಿತಿಗೆ ಹಾಜರ್ ಆಗುವಂತೆ  ಸಿಜೆಐ ಅವರಿಗೆ ಮನವಿ ಪತ್ರ ಕಳುಹಿಸಲಾಗಿತ್ತು. ಅದಕ್ಕೆ ಪ್ರತಿಕ್ರಿಯಿಸಿದ ಅವರು ಸಮಿತಿ ಸದಸ್ಯರ ಬಳಿ ಹಾಜರಾದರು’ ಎಂದು ಮೂಲಗಳು ಹೇಳಿವೆ. 

ಸಿಜೆಐ ವಿರುದ್ಧ ಆರೋಪ ಮಾಡಿರುವ ಮಹಿಳೆ, ‘ಸಮಿತಿಯಿಂದ ನ್ಯಾಯ ಸಿಗುವುದಿಲ್ಲ ಎನ್ನುವ ಭಾವನೆ ಬಂದಿದೆ. ಜತೆಗೆ ವಕೀಲರನ್ನು ಕರೆದೊಯ್ಯಲು ಅನುಮತಿ ನೀಡುತ್ತಿಲ್ಲ. ಇದರಿಂದಾಗಿ ಇನ್ನು ಮುಂದೆ ತನಿಖಾ ಸಮಿತಿ ಎದುರು ಹಾಜರಾಗುವುದಿಲ್ಲ’ ಎಂದು ಮಂಗಳವಾರ ಮಾಧ್ಯಮಗಳಿಗೆ ಬಿಡುಗಡೆಗೊಳಿಸಿದ್ದ ಪ್ರಕಟಣೆಯಲ್ಲಿ ತಿಳಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು