ಮಂಗಳವಾರ, ಡಿಸೆಂಬರ್ 10, 2019
26 °C

ಶಬರಿಮಲೆ: ನಿರ್ಬಂಧ ತೆರವು ಸದ್ಯಕ್ಕಿಲ್ಲ

ಪಿಟಿಐ Updated:

ಅಕ್ಷರ ಗಾತ್ರ : | |

ತಿರುವನಂತಪುರ: ಶಬರಿಮಲೆ ಅಯ್ಯಪ್ಪಸ್ವಾಮಿ ದೇವಸ್ಥಾನ ಆವರಣ ಪ್ರವೇಶ ಸಂಬಂಧ ಜಾರಿಗೊಳಿಸಿರುವ ನಿರ್ಬಂಧಗಳನ್ನು ಹಿಂದಕ್ಕೆ ಪಡೆಯಲು ಸಾಧ್ಯವಿಲ್ಲ ಎಂದು ಎಲ್‌ಡಿಎಫ್‌ ನೇತೃತ್ವದ ಕೇರಳ ಸರ್ಕಾರ ಸ್ಪಷ್ಟಪಡಿಸಿದೆ.

ನಿರ್ಬಂಧ ಹೇರಿರುವುದರಿಂದ ಭಕ್ತರಿಗೆ ತೊಂದರೆಯಾಗುತ್ತಿದ್ದು, ತಕ್ಷಣವೇ ತೆರವುಗೊಳಿಸಬೇಕು ಹಾಗೂ ಭಕ್ತರಿಗೆ ಇನ್ನಷ್ಟು ಸೌಲಭ್ಯ ಒದಗಿಸಬೇಕು ಎಂದು ಆಗ್ರಹಿಸಿ ವಿರೋಧ ಪಕ್ಷಗಳ ಮೂವರು ಶಾಸಕರ ವಿಧಾನಸಭೆಯಲ್ಲಿ ನಡೆಸುತ್ತಿರುವ ಸತ್ಯಾಗ್ರಹ 4ನೇ ದಿನಕ್ಕೆ ಕಾಲಿಟ್ಟಿದೆ. ಆದರೆ, ಸರ್ಕಾರ ಪ್ರತಿಭಟನೆಗೆ ಮಣಿದಿಲ್ಲ.

‘ಮಹಿಳೆಯರು ದೇವಸ್ಥಾನ ಪ್ರವೇಶಿಸಲು ಈಗ ಅನುಕೂಲಕರವಾದ ಪರಿಸ್ಥಿತಿ ಇಲ್ಲ. 10ರಿಂದ 50 ವರ್ಷದ ಮಹಿಳೆಯರಿಗೆ ದೇವಸ್ಥಾನ ಪ್ರವೇಶಿಸಲು ಅನುಮತಿ ನೀಡುವ ಸಲುವಾಗಿ ಯಾವುದೇ ಕಾಯ್ದೆ ತರುವ ಯೋಚನೆಯನ್ನು ಸರ್ಕಾರ ಮಾಡಿಲ್ಲ ಎಂದು ಮುಜರಾಯಿ ಸಚಿವ ಕಡಕಂಪಳ್ಳಿ ಸುರೇಂದ್ರನ್‌ ವಿಧಾನಸಭೆಯಲ್ಲಿ ತಿಳಿಸಿದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು