ಶನಿವಾರ, ಫೆಬ್ರವರಿ 22, 2020
19 °C

ಶಾಹೀನ್ ಬಾಗ್ ಪ್ರತಿಭಟನೆ| ಅನಿರ್ದಿಷ್ಟಾವಧಿ ರಸ್ತೆ ತಡೆ ಮಾಡುವಂತಿಲ್ಲ: ಸುಪ್ರೀಂ

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಅನಿರ್ದಿಷ್ಟ ಅವಧಿ ಸಾರ್ವಜನಿಕ ರಸ್ತೆ ತಡೆ ಮಾಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿಸಿ ಶಾಹೀನ್ ಬಾಗ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆ ತೆರವುಗೊಳಿಸಬೇಕು ಎಂದು ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ದೆಹಲಿ ಸರ್ಕಾರ ಮತ್ತು ಪೊಲೀಸರಿಗೆ ನೋಟಿಸ್ ನೀಡಿದೆ. ಮುಂದಿನ ವಿಚಾರಣೆಯನ್ನು ಇದೇ 17ರಂದು ನಿಗದಿಪಡಿಸಲಾಗಿದೆ.

ಸಿಎಎ, ಎನ್‌ಆರ್‌ಸಿ, ಎನ್‌ಪಿಆರ್‌ ವಿರೋಧಿಸಿ ಮಹಿಳೆಯರು, ಮಕ್ಕಳು ಸೇರಿದಂತೆ ನೂರಾರು ಮಂದಿ ಶಾಹೀನ್ ಬಾಗ್‌ನಲ್ಲಿ ಸುಮಾರು 50 ದಿನಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾಕಾರರ ತೆರವಿಗೆ ಆದೇಶಿಸಬೇಕು ಎಂದು ವಕೀಲ ಅಮಿತ್ ಸಾಹ್‌ನಿ, ಬಿಜೆಪಿ ನಾಯಕ ನಂದ ಕಿಶೋರ್ ಗರ್ಗ್‌ ಸಲ್ಲಿಸಿರುವ ಅರ್ಜಿಯನ್ನು ದೆಹಲಿ ಚುನಾವಣೆ ಮುಗಿದ ಬಳಿಕ ವಿಚಾರಣೆ ನಡೆಸುವುದಾಗಿ ಸುಪ್ರೀಂ ಕೋರ್ಟ್ ಈ ಹಿಂದೆ ತಿಳಿಸಿತ್ತು.

‘ಒಂದೂವರೆ ತಿಂಗಳಿಗೂ ಹೆಚ್ಚು ಸಮಯದಿಂದ ದೆಹಲಿಯ ಶಾಹೀನ್ ಬಾಗ್, ಕಾಳಿಂದಿ ಕುಂಜ್ ಪ್ರದೇಶಗಳಲ್ಲಿ ಪ್ರತಿಭಟನೆ ನಡೆಯುತ್ತಿದೆ. ದೆಹಲಿ ಹಾಗೂ ನೋಯ್ಡಾಗಳ ರಸ್ತೆಗಳನ್ನು ಬಂದ್ ಮಾಡಲಾಗಿದೆ. ಇದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆ ಉಂಟಾಗುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವುದರಿಂದ ಜನರ ದಿನನಿತ್ಯದ ಕೆಲಸಗಳಿಗೆ ತೊಂದರೆ ಉಂಟಾಗುತ್ತಿದ್ದು, ಇದನ್ನು ತಪ್ಪಿಸಲು ಸಮಗ್ರ ಮಾರ್ಗಸೂಚಿ ರಚಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು’ ಎಂದು ಗರ್ಗ್‌ ಸಲ್ಲಿಸಿರುವ ಅರ್ಜಿಯಲ್ಲಿ ಮನವಿ ಮಾಡಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು