ಮಂಗಳವಾರ, ಫೆಬ್ರವರಿ 18, 2020
18 °C

ಸುಲಿಗೆ ಆರೋಪ: ಕಾನೂನು ವಿದ್ಯಾರ್ಥಿನಿಗೆ ಜಾಮೀನು ಮಂಜೂರು

ಪಿಟಿಐ Updated:

ಅಕ್ಷರ ಗಾತ್ರ : | |

ಅಲಹಾಬಾದ್‌: ಬಿಜೆಪಿ ಮುಖಂಡ ಸ್ವಾಮಿ ಚಿನ್ಮಯಾನಂದ ಅವರಿಂದ ಹಣ ಸುಲಿಗೆ ಮಾಡಲು ಯತ್ನಿಸಿದ ಆರೋಪ ಎದುರಿಸುತ್ತಿದ್ದ ಕಾನೂನು ವಿದ್ಯಾರ್ಥಿನಿಗೆ ಅಲಹಾಬಾದ್‌ ಹೈಕೋರ್ಟ್‌ ಬುಧವಾರ ಜಾಮೀನು ಮಂಜೂರು ಮಾಡಿದೆ.

ಸ್ವಾಮಿ ಚಿನ್ಮಯಾನಂದ ಒಡೆತನ ಟ್ರಸ್ಟ್‌ ನಡೆಸುತ್ತಿರುವ ಶಾಹಜಹಾನ್‌ಪುರ ಕಾನೂನು ಕಾಲೇಜಿನಲ್ಲಿ ಅಧ್ಯಯನ ಮಾಡುತ್ತಿದ್ದ ವಿದ್ಯಾರ್ಥಿನಿ, ‘ನನ್ನ ಮೇಲೆ ಚಿನ್ಮಯಾನಂದ ಅತ್ಯಾಚಾರ ಎಸಗಿದ್ದಾರೆ’ ಎಂದು ಆರೋಪಿಸಿದ್ದಾರೆ.

ಆದರೆ, ‘ಆರೋಪಿತ ವಿದ್ಯಾರ್ಥಿನಿ ಹಾಗೂ ಆಕೆಯ ಮೂವರು ಸ್ನೇಹಿತರು ₹5 ಕೋಟಿ ನೀಡುವಂತೆ ನನ್ನ ಬಳಿ ಬೇಡಿಕೆ ಇಟ್ಟಿದ್ದರು’ ಎಂಬುದಾಗಿ ಚಿನ್ಮಯಾನಂದ ನೀಡಿದ್ದ ದೂರಿನನ್ವಯ ಈಕೆಯನ್ನು ಪೊಲೀಸರು ಬಂಧಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು