ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಶಿ ತರೂರ್ ವಿರುದ್ಧ ಬಂಧನ ವಾರಂಟ್

Last Updated 13 ಆಗಸ್ಟ್ 2019, 19:45 IST
ಅಕ್ಷರ ಗಾತ್ರ

ಕೋಲ್ಕತ್ತ (ಪಿಟಿಐ): ಕಾಂಗ್ರೆಸ್ ಸಂಸದ ಶಶಿ ತರೂರ್ ಕಳೆದ ವರ್ಷ ನೀಡಿದ್ದ ‘ಹಿಂದೂಪಾಕಿಸ್ತಾನ’ ಹೇಳಿಕೆ ಸಂಬಂಧ ಇಲ್ಲಿನ ಮೆಟ್ರೊಪಾಲಿಟನ್ ನ್ಯಾಯಾಲಯ ಮಂಗಳವಾರ ಅವರ ವಿರುದ್ಧ ಬಂಧನ ವಾರಂಟ್ ಜಾರಿ ಮಾಡಿದೆ.

ಕೇಂದ್ರದಲ್ಲಿ ಪುನಃ ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ತಿದ್ದುಪಡಿ ಮಾಡಿ ‘ಹಿಂದೂ ಪಾಕಿಸ್ತಾನ’ ರಚಿಸಲು ಅವಕಾಶ ಮಾಡಿಕೊಡಬಹುದು ಎಂದು ತರೂರ್ ಹೇಳಿದ್ದರು. ಈ ಕುರಿತು ವಿವಾದ ಸೃಷ್ಟಿಯಾಗಿ, ತರೂರ್‌ ಕ್ಷಮೆ ಕೋರಬೇಕೆಂದು ಬಿಜೆಪಿ ಆಗ್ರಹಿಸಿತ್ತು.

ತರೂರ್‌ ಹೇಳಿಕೆಯಿಂದ ಜನರ ನಡುವಿನ ಸೌಹಾರ್ದಕ್ಕೆ ಧಕ್ಕೆಯಾಗಿದೆ ಎಂದು ವಕೀಲರಾದ ಸುಮಿತ್ ಚೌಧರಿ ದೂರು ಸಲ್ಲಿಸಿದ್ದರು.

ಮುಖ್ಯ ಮ್ಯಾಜಿಸ್ಟ್ರೇಟ್ ನ್ಯಾಯಾಧೀಶ ದೀಪಂಜನ್ ಸೇನ್ ಅವರು ಪ್ರಕರಣದ ಮುಂದಿನ ವಿಚಾರಣೆಯನ್ನು ಸೆ.24ಕ್ಕೆ ನಿಗದಿಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT