ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಎಸ್‌ಪಿಗೆ ಸೇರ್ಪಡೆ

ಮಂಗಳವಾರ, ಏಪ್ರಿಲ್ 23, 2019
31 °C
ರಾಜನಾಥ್ ಸಿಂಗ್ ವಿರುದ್ಧ ಕಣಕ್ಕೆ?

ಶತ್ರುಘ್ನ ಸಿನ್ಹಾ ಪತ್ನಿ ಪೂನಂ ಎಸ್‌ಪಿಗೆ ಸೇರ್ಪಡೆ

Published:
Updated:
Prajavani

ಲಖನೌ: ಬಿಜೆಪಿ ತೊರೆದು ಇತ್ತೀಚೆಗೆ ಕಾಂಗ್ರೆಸ್‌ ಸೇರಿರುವ ಶತ್ರುಘ್ನ ಸಿನ್ಹಾ ಅವರ ಪತ್ನಿ ಪೂನಂ ಸಿನ್ಹಾ ಅವರು ಮಂಗಳವಾರ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. 

ಎಸ್‌ಪಿ ನಾಯಕಿ ಡಿಂಪಲ್ ಯಾದವ್ ಸಮ್ಮುಖದಲ್ಲಿ ಪೂನಂ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಟ್ವಿಟರ್ ಖಾತೆಯಲ್ಲಿ ಉಲ್ಲೇಖಿಸಲಾಗಿದೆ. ಚಿತ್ರವನ್ನೂ ಪ್ರಕಟಿಸಲಾಗಿದೆ.

ಇದನ್ನೂ ಓದಿ: ಪ್ರಧಾನಿ ಮೋದಿ ವಿರುದ್ಧ ಸ್ಪರ್ಧಿಸಲು ಇಷ್ಟವಿದೆ ಎಂದ ಶತ್ರುಘ್ನ ಸಿನ್ಹಾ​

 

ಇವರನ್ನು ಲಖನೌ ಲೋಕಸಭಾ ಕ್ಷೇತ್ರದಿಂದ ಕಣಕ್ಕಿಳಿಸುವ ಸಾಧ್ಯತೆಯಿದೆ. ಈ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಕೇಂದ್ರ ಗೃಹಸಚಿವ ರಾಜನಾಥ್ ಸಿಂಗ್ ಅವರು ಮಂಗಳವಾರ ನಾಮಪತ್ರ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಗೃಹಸಚಿವ ರಾಜನಾಥ್‌ ಸಿಂಗ್ ಕಣಕ್ಕೆ

ಸ್ಪರ್ಧೆ ಬಗ್ಗೆ ನೇರವಾಗಿ ಉತ್ತರಿಸದ ಪೂನಂ, ಕಾದು ನೋಡಿ ಎಂದಷ್ಟೇ ಹೇಳಿದರು. ಇವರು ಏಪ್ರಿಲ್ 18ರಂದು ನಾಮಪತ್ರ ಸಲ್ಲಿಸುವ ಸಾಧ್ಯತೆಯಿದೆ. ಮೇ 6ರಂದು ಇಲ್ಲಿ ಮತದಾನ ನಡೆಯಲಿದೆ.

ಇನ್ನಷ್ಟು..

ಬಿಜೆಪಿ ಒನ್ ಮ್ಯಾನ್ ಆರ್ಮಿ, ಕಾಂಗ್ರೆಸ್ ಸೇರಿದ ಶತ್ರುಘ್ನ ಸಿನ್ಹಾ​

ತಂದೆ ಆಗಲೇ ಬಿಜೆಪಿಯನ್ನು ತೊರೆಯಬೇಕಾಗಿತ್ತು -ಸೋನಾಕ್ಷಿ ಸಿನ್ಹಾ​

ಬರಹ ಇಷ್ಟವಾಯಿತೆ?

 • 3

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !