ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೋದಿ ಬೆಂಬಲಿಸಲು ಶಿಯಾ ಮುಸ್ಲಿಮರ ನಿರ್ಧಾರ

Last Updated 25 ಜೂನ್ 2018, 20:05 IST
ಅಕ್ಷರ ಗಾತ್ರ

ಲಖನೌ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಪ್ರಧಾನಿ ಅಭ್ಯರ್ಥಿಯಾಗಿ ನರೇಂದ್ರ ಮೋದಿ ಅವರನ್ನು ಬೆಂಬಲಿಸಲು ಶಿಯಾ ಮುಸ್ಲಿಮರು ನಿರ್ಧರಿಸಿದ್ದಾರೆ.

‘ಮೋದಿ ಅವರನ್ನು ಬೆಂಬಲಿಸುವುದರ ಜೊತೆಗೆ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಿಸುವುದರ ಪರವಾಗಿ ಇದ್ದೇವೆ’ ಎಂದು ರಾಷ್ಟ್ರೀಯ ಶಿಯಾ ಸಮಾಜದ (ಆರ್‌ಎಸ್‌ಎಸ್) ಮುಖ್ಯಸ್ಥ ಬುಕ್ಕಲ್ ನವಾಬ್ ಹೇಳಿದ್ದಾರೆ. ಇವರು ಉತ್ತರ ಪ್ರದೇಶದ ಬಿಜೆಪಿ ಬೆಂಬಲಿತ ಪರಿಷತ್ ಸದಸ್ಯ.

‘ಮೋದಿ ಅವರು ಮತ್ತೊಮ್ಮೆ ಪ್ರಧಾನಿ ಸ್ಥಾನ ಅಲಂಕರಿಸುವುದನ್ನು ಸಮುದಾಯ ಬಯಸುತ್ತದೆ. ಬಿಜೆಪಿಯನ್ನು ಹೊರತುಪಡಿಸಿದರೆ ಬೇರಾವ ಪಕ್ಷವೂ ಶಿಯಾ ಮುಸ್ಲಿಮರ ಬಗ್ಗೆ ಕಾಳಜಿ ಹೊಂದಿಲ್ಲ’ ಎಂದು ಅವರು ಹೇಳಿದ್ದಾರೆ. ಮುಸ್ಲಿಮರ ಪೈಕಿ ಶಿಯಾ ಸಮುದಾಯ ಶೇ 18ರಷ್ಟು ಜನಸಂಖ್ಯೆ ಹೊಂದಿದೆ.

ಇದೊಂದು ಸೂಕ್ಷ್ಮ ವಿಷಯ. ನಿರ್ಧಾರ ತೆಗೆದುಕೊಳ್ಳುವ ಮುನ್ನ ಎಲ್ಲರೂ ಚರ್ಚಿಸುತ್ತೇವೆ ಮೌಲಾನಾ ಯಸೂಬ್ ಅಬ್ಬಾಸ್, ಶಿಯಾ ವೈಯಕ್ತಿಕ ಕಾನೂನು ಮಂಡಳಿ ವಕ್ತಾರ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT