ಶುಕ್ರವಾರ, ಡಿಸೆಂಬರ್ 13, 2019
26 °C

ಐದು ವರ್ಷವೂ ಶಿವಸೇನಾಗೆ ಮುಖ್ಯಮಂತ್ರಿ ಹುದ್ದೆ: ಸಂಜಯ್ ರಾವುತ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮುಂಬೈ: ಮಹಾರಾಷ್ಟ್ರದಲ್ಲಿ ಶಿವಸೇನಾ–ಎನ್‌ಸಿಪಿ–ಕಾಂಗ್ರೆಸ್‌ ಮೈತ್ರಿಕೂಟದ ಹೊಸ ಸರ್ಕಾರ ರಚನೆಗೆ ಮಾತುಕತೆ ನಡೆಯುತ್ತಿರುವ ಬೆನ್ನಲ್ಲೇ ಶಿವಸೇನಾದವರೇ 5 ವರ್ಷಗಳ ಕಾಲ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯಲಿದ್ದಾರೆ ಎಂದು ಸಂಸದ ಸಂಜಯ್ ರಾವುತ್ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಗವಾನ್ ಇಂದ್ರನ ಸಿಂಹಾಸನವನ್ನು ನೀಡುತ್ತೇವೆ ಎಂದರೂ ಕೂಡ ಶಿವಸೇನಾ ಬಿಜೆಪಿಯೊಂದಿಗೆ ಹೋಗುವುದಿಲ್ಲ. ಕಾಂಗ್ರೆಸ್ ಮತ್ತು ಎನ್‌ಸಿಪಿ ಜೊತೆಗಿನ ಮೂರು ಪಕ್ಷಗಳ ಮೈತ್ರಿ ಅಧಿಕಾರ ವಹಿಸಿಕೊಂಡಾಗ ತಮ್ಮ ಪಕ್ಷಕ್ಕೆ ಮಹಾರಾಷ್ಟ್ರ ಸಿಎಂ ಹುದ್ದೆ ಸಿಗಲಿದೆ ಎಂದು ರಾವುತ್ ಪುನರುಚ್ಚರಿಸಿದರು.

ಇದನ್ನೂ ಓದಿ:  ಮಹಾರಾಷ್ಟ್ರ ರಾಜಕಾರಣ | ಸರ್ಕಾರ ರಚನೆ ಸನ್ನಿಹಿತ

ಬಿಜೆಪಿಯು ಸೇನಾದೊಂದಿಗೆ ಮುಖ್ಯಮಂತ್ರಿ ಹುದ್ದೆ ಹಂಚಿಕೆಗೆ ಒಪ್ಪಿಕೊಂಡಿದೆ ಎನ್ನುವ ವರದಿಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಹಾರಾಷ್ಟ್ರದ ಜನರು ಶಿವಸೇನಾ ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತಿದ್ದಾರೆ ಎಂದರು.

ಬಿಜೆಪಿಯೇತರ ಮೂರು ಪಕ್ಷಗಳು ಶುಕ್ರವಾರವೇ ರಾಜ್ಯಪಾಲರನ್ನು ಭೇಟಿಯಾಗುತ್ತವೆಯೇ ಎಂದು ಕೇಳಿದ್ದಕ್ಕೆ ಉತ್ತರಿಸಿ, ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಜಾರಿಯಲ್ಲಿರುವಾಗ ರಾಜ್ಯಪಾಲರನ್ನು ಏಕೆ ಭೇಟಿಯಾಗಬೇಕು ಎಂದು ಪ್ರಶ್ನಿಸಿದರು.

ರೈತರು, ನಿರುದ್ಯೋಗ, ಶಿಕ್ಷಣ ಮತ್ತು ಆರೋಗ್ಯ ವಿಚಾರಗಳಿಗೆ ಆದ್ಯತೆ ನೀಡಿ ಮೂರು ಪಕ್ಷಗಳು ಸೇರಿ ಈಗಾಗಲೇ ಸಾಮಾನ್ಯ ಕನಿಷ್ಠ ಕಾರ್ಯಕ್ರಮ(CMP)ವನ್ನು ರೂಪಿಸಿವೆ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು