ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸುಪ್ರೀಂ ಕೋರ್ಟ್ ಮೊರೆ ಹೋಗಲು ತೀರ್ಮಾನಿಸಿದ ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌

Last Updated 23 ನವೆಂಬರ್ 2019, 14:34 IST
ಅಕ್ಷರ ಗಾತ್ರ

ಮುಂಬೈ: ಮಹಾರಾಷ್ಟ್ರದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಅವಕಾಶ ಕಲ್ಪಿಸಿದ ರಾಜ್ಯಪಾಲರ ನಡೆಯನ್ನು ಪ್ರಶ್ನಿಸಿ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ಪಕ್ಷಗಳು ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧರಿಸಿವೆ.

‘ದೇವೇಂದ್ರ ಫಡಣವೀಸ್‌ ಅವರು ಹೇಗೆ ಮತ್ತು ಯಾವ ರೀತಿಯಲ್ಲಿ ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ ಎಂಬುದು ಸಾರ್ವಜನಿಕರಿಗೆ ತಿಳಿದಿಲ್ಲ. ಬಿಜೆಪಿಯು ತನ್ನ ಅಧಿಕಾರ ಶಕ್ತಿಯಿಂದ ರಾಜ್ಯಭವನವನ್ನು ದುರುಪಯೋಗ ಮಾಡಿಕೊಂಡಿದೆ. ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್‌ ಮಧ್ಯ ಪ್ರವೇಶಿಸಬೇಕು,’ ಎಂದು ಉನ್ನತ ನ್ಯಾಯಾಲಯಕ್ಕೆ ಮೂರು ಪಕ್ಷಗಳು ಮನವಿ ಸಲ್ಲಿಸಲುತೀರ್ಮಾನಿಸಿವೆ.

‘ದೇವೇಂದ್ರ ಫಡಣವೀಸ್‌ ಅವರು ಮುಖ್ಯ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಲು ರಾಜ್ಯಪಾಲರ ಬಳಿ ತೆರಳುವಾಗ 144 ಶಾಸಕರ ಸಹಿಗಳಿರುವ ಪತ್ರಗಳನ್ನು ತೆಗೆದುಕೊಂಡು ಹೋಗಬೇಕು. ಆದರೆ, ಫಡಣವೀಸ್‌ ಯಾವುದೇ ‍ಪತ್ರ ತೆಗೆದುಕೊಂಡು ಹೋಗಿರುವುದರ ಬಗ್ಗೆ ಮಾಹಿತಿ ಇಲ್ಲ. ಅಜಿತ್‌ ಪವಾರ್ ಅವರನ್ನು ಹೊರತುಪಡಿಸಿ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ನ ಎಲ್ಲ ಶಾಸಕರು ನಮ್ಮ ಮೈತ್ರಿಯನ್ನು ಒಪ್ಪಿಕೊಂಡಿದ್ದಾರೆ,’ ಎಂದು ಸುಪ್ರೀಂ ಕೋರ್ಟ್‌ಗೆ ಸಲ್ಲಿಸಲಿರುವ ಅರ್ಜಿಯಲ್ಲಿ ತಿಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT