ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಹಾರಾಷ್ಟ್ರ: ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ‌ಶಿವಸೇನಾ, ಎನ್‌ಸಿಪಿ, ಕಾಂಗ್ರೆಸ್‌

Last Updated 25 ನವೆಂಬರ್ 2019, 6:39 IST
ಅಕ್ಷರ ಗಾತ್ರ

ಮುಂಬೈ:ಸುಪ್ರೀಂ ಕೋರ್ಟ್‌ ವಿಚಾರಣೆಗೂ ಮುನ್ನ ಮಹಾರಾಷ್ಟ್ರದ ಶಿವಸೇನಾ, ಎನ್‌ಸಿಪಿ ಮತ್ತು ಕಾಂಗ್ರೆಸ್‌ ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ.

ರಾಜ್ಯಪಾಲ ಭಗತ್‌ ಸಿಂಗ್‌ ಕೋಶಿಯಾರಿ ಅವರು ದೆಹಲಿಯಲ್ಲಿರುವ ಕಾರಣ ಅವರಕಾರ್ಯದರ್ಶಿಗೆ ಮೂರು ಪಕ್ಷಗಳ ನಾಯಕರು ಹಕ್ಕು ಮಂಡನೆಪತ್ರ ಸಲ್ಲಿಸಿದ್ದಾರೆಂದು ತಿಳಿದುಬಂದಿದೆ.

ಹಕ್ಕು ಮಂಡಿಸಿದನಾಯಕರತಂಡದಲ್ಲಿ ಶಿವಸೇನಾ ಶಾಸಕಾಂಗ ಪಕ್ಷದ ನಾಯಕ ಏಕನಾಥ್‌ ಶಿಂದೆ, ಮಹಾರಾಷ್ಟ್ರ ಕಾಂಗ್ರೆಸ್‌ ಮುಖ್ಯಸ್ಥ ಬಾಳಾಸಾಹೇಬ್‌ ಥೋರಟ್‌ ಮತ್ತು ಎನ್‌ಸಿಪಿ ರಾಜ್ಯಾಧ್ಯಕ್ಷ ಜಯಂತ್‌ ಪಾಟೀಲ್‌ ಅವರು ಹಾಜರಿದ್ದರು.

ಆ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್‌ ವಕ್ತಾರ ಸಚಿನ್‌ ಸಾವಂತ್‌, ‘ಕಾಂಗ್ರೆಸ್‌, ಶಿವಸೇನಾ ಮತ್ತು ಎನ್‌ಸಿಪಿ ನಾಯಕರು ರಾಜಭವನಕ್ಕೆ ತೆರಳಿ ಸರ್ಕಾರ ರಚನೆ ಸಂಬಂಧ ತಮ್ಮ ಹಕ್ಕು ಮಂಡನೆ ಪತ್ರಸಲ್ಲಿಸಿದ್ದಾರೆ. ಕಾರಣ, ಈಗ ರಚನೆಯಾಗಿರುವ ಸರ್ಕಾರ ಭವಿಷ್ಯದಲ್ಲಿ ಪತನಗೊಳ್ಳಲಿದೆ. ಇನ್ನೊಂದು ಸಾರಿ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತ ಬರಬಾರದು ಎಂಬುದು ನಮ್ಮ ಆಶಯ,’ ಎಂದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT