ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಚಾರಣೆಗಾಗಿ ತನ್ನ ವಶಕ್ಕೆ ಡಿಕೆಶಿ ನೀಡುವಂತೆ ಕೋರಿ ಇಂದು ಇಡಿ ಮನವಿ ಸಾಧ್ಯತೆ

Last Updated 4 ಸೆಪ್ಟೆಂಬರ್ 2019, 2:26 IST
ಅಕ್ಷರ ಗಾತ್ರ

ನವದೆಹಲಿ: ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಅವರನ್ನು ಜಾರಿ ನಿರ್ದೇಶನಾಲಯವು ಬುಧವಾರ ರೋಸ್‌ ಅವಿನ್ಯೂ ನ್ಯಾಯಾಲಯ ಸಮುಚ್ಚಯದ ವಿಶೇಷ ನ್ಯಾಯಾಲಯಕ್ಕೆ ಬುಧವಾರ ಹಾಜರುಪಡಿಸುವ ಸಾಧ್ಯತೆ ಇದೆ.

ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ ಅನ್ವಯ ದಾಖಲಾಗಿರುವ ಪ್ರಕರಣವನ್ನು ವಿಶೇಷ ನ್ಯಾಯಾಧೀಶ ಅಜಯ್‌ ಕುಮಾರ್ ಕುಹಾರ್ ವಿಚಾರಣೆಗೆ ಕೈಗೆತ್ತಿಕೊಳ್ಳಲಿದ್ದಾರೆ.

ಜಾರಿ ನಿರ್ದೇಶನಾಲಯವು ಡಿ.ಕೆ.ಶಿವಕುಮಾರ್ ಅವರ ಸಫ್ತಾರ್‌ಜಂಗ್ ಎನ್‌ಕ್ಲೇವ್‌ ನಿವಾಸದ ಮೇಲೆ ನಡೆಸಿದ ದಾಳಿಯ ವೇಳೆ ಪತ್ತೆಯಾದ₹8.56ಕೋಟಿ ಹಣಕ್ಕೆ ಸಂಬಂಧಿಸಿದ ಹೆಚ್ಚಿನ ವಿಚಾರಣೆ ನಡೆಸಲುತನ್ನ ವಶಕ್ಕೆ ನೀಡುವಂತೆ ಮನವಿ ಸಲ್ಲಿಸುವ ಸಾಧ್ಯತೆ ಇದೆ.

35 ಗಂಟೆಗಳ ಕಾಲ ಸತತ ವಿಚಾರಣೆ ನಡೆಸಿದ ನಂತರವೂ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೆ ಯಾವುದೇ ಮಾಹಿತಿ ಲಭ್ಯವಾಗಿರಲಿಲ್ಲ ಎಂದು ಮೂಲಗಳು ಹೇಳಿವೆ. ತಮ್ಮ ನಿವಾಸದಲ್ಲಿ ದೊರೆತ ಹಣಕ್ಕೆ ಸಂಬಂಧಿಸಿದಂತೆ ಡಿ.ಕೆ.ಶಿವಕುಮಾರ್ ವೈರುಧ್ಯದ ಹೇಳಿಕೆಗಳನ್ನು ನೀಡಿರುವ ಕಾರಣ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಶಿವಕುಮಾರ್ ಅವರನ್ನು ತಮ್ಮ ವಶಕ್ಕೆ ಒಪ್ಪಿಸಲು ಕೋರುವ ಸಾಧ್ಯತೆ ನಿಚ್ಚಳವಾಗಿದೆ ಎಂದು ಮೂಲಗಳು ಹೇಳಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT