ಭಾನುವಾರ, ಏಪ್ರಿಲ್ 5, 2020
19 °C

ಮಧ್ಯಪ್ರದೇಶದಲ್ಲಿ ಬಿಜೆಪಿ ಸರ್ಕಾರ: ಇಂದು ಶಿವರಾಜ್‌ ಸಿಂಗ್ ಚೌಹಾಣ್ ಪ್ರಮಾಣವಚನ?

ಏಜೆನ್ಸೀಸ್ Updated:

ಅಕ್ಷರ ಗಾತ್ರ : | |

Shivraj Chouha

ಭೋಪಾಲ: ಮಧ್ಯಪ್ರದೇಶದಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ರಚನೆಗೆ ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿಯಾಗಿ ಇಂದು ರಾತ್ರಿ  ಶಿವರಾಜ್‌ ಸಿಂಗ್ ಚೌಹಾಣ್ ಅಧಿಕಾರ ಸ್ವೀಕರಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಒಟ್ಟು 22 ಶಾಸಕರ ರಾಜೀನಾಮೆಯಿಂದಾಗಿ ಕಾಂಗ್ರೆಸ್‌ ಸರ್ಕಾರ ಅಲ್ಪಮತಕ್ಕೆ ಕುಸಿದಿದ್ದರಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಕಮಲ್ ನಾಥ್ ಅವರು ಕಳೆದ ಶುಕ್ರವಾರ ರಾಜೀನಾಮೆ ನೀಡಿದ್ದರು. ಇದರೊಂದಿಗೆ ಕಾಂಗ್ರೆಸ್ ಸರ್ಕಾರ ಪತನವಾಗಿತ್ತು.

ಇದನ್ನೂ ಓದಿ: ಕಮಲ್ ನಾಥ್ ರಾಜೀನಾಮೆ: ಮಧ್ಯಪ್ರದೇಶ ಕಾಂಗ್ರೆಸ್ ಸರ್ಕಾರ ಪತನ

ಜ್ಯೋತಿರಾದಿತ್ಯ ಸಿಂಧಿಯಾ ಬಿಜೆಪಿ ಸೇರಿದ ಬಳಿಕ ಮಧ್ಯಪ್ರದೇಶ ಕಾಂಗ್ರೆಸ್‌ನಲ್ಲಿ ಬಿಕ್ಕಟ್ಟು ಸೃಷ್ಟಿಯಾಗಿತ್ತು. 22 ಬಂಡಾಯ ಶಾಸಕರು ರಾಜೀನಾಮೆ ನೀಡಿದ್ದರು. ಈ ಪೈಕಿ 6 ಶಾಸಕರ ರಾಜೀನಾಮೆ ಅಂಗೀಕಾರವಾಗಿದ್ದು, ಉಳಿದವರದ್ದು ಇತ್ಯರ್ಥವಾಗದೆ ಉಳಿದುಕೊಂಡಿತ್ತು. ಶುಕ್ರವಾರ 16 ಶಾಸಕರ ರಾಜೀನಾಮೆಯನ್ನು ವಿಧಾನಸಭೆ ಸ್ಪೀಕರ್ ಎನ್‌.ಪಿ. ಪ್ರಜಾಪತಿ ಅಂಗೀಕರಿಸಿದ್ದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು