ಬಿಜೆಪಿ ವಕ್ತಾರನ ಮೇಲೆ ಶೂ ಎಸೆತ

ಸೋಮವಾರ, ಮೇ 20, 2019
32 °C
ದೆಹಲಿ: ಸುದ್ದಿಗೋಷ್ಠಿಯಲ್ಲಿ ನಡೆದ ಘಟನೆ

ಬಿಜೆಪಿ ವಕ್ತಾರನ ಮೇಲೆ ಶೂ ಎಸೆತ

Published:
Updated:

ನವದೆಹಲಿ: ಬಿಜೆಪಿ ಕೇಂದ್ರ ಕಚೇರಿಯಲ್ಲಿ ಗುರುವಾರ ಸುದ್ದಿಗೋಷ್ಠಿ ನಡೆಸುತ್ತಿದ್ದ ಪಕ್ಷದ ವಕ್ತಾರ ಜಿವಿಎನ್ ನರಸಿಂಹರಾವ್ ಅವರ ಮೇಲೆ ವ್ಯಕ್ತಿಯೊಬ್ಬ ಶೂ ಎಸೆದಿದ್ದಾನೆ. 

ಶೂ ಎಸೆದ ಕಾನ್ಪುರದ ವೈದ್ಯ ಶಕ್ತಿ ಭಾರ್ಗವ ಎಂಬಾತನನ್ನು ಭದ್ರತಾ ಪಡೆ ಸಿಬ್ಬಂದಿ ವಶಕ್ಕೆ ಪಡೆದಿದ್ದಾರೆ.

ಶೂ ಎಸೆಯಲು ನಿಖರ ಕಾರಣ ತಿಳಿದುಬಂದಿಲ್ಲ. ಆದರೆ ಮಾಲೇಂಗಾವ್ ಸ್ಫೋಟ ಪ್ರಕರಣದ ಆರೋಪಿ ಸಾಧ್ವಿ ಪ್ರಜ್ಞಾ ಸಿಂಗ್ ಅವರಿಗೆ ಟಿಕೆಟ್ ನೀಡಿದ ಬಿಜೆಪಿ ನಿರ್ಧಾರವನ್ನು ಅವರು ವಿರೋಧಿಸಿದ್ದರು ಎನ್ನಲಾಗಿದೆ. 

ರಾವ್ ಅವರು ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರು. ‘ಪ್ರಜ್ಞಾ ಸಿಂಗ್ ಠಾಕೂರ್ ಸೇರಿದಂತೆ ಹಿಂದುತ್ವವಾದಿ ಕಾರ್ಯಕರ್ತರ ಮೇಲೆ ಸುಳ್ಳು ಪ್ರಕರಣಗಳನ್ನು ದಾಖಲಿಸುವ ಮೂಲಕ ಕಾಂಗ್ರೆಸ್ ಹಿಂದೂಗಳಿಗೆ ಅಪಮಾನ ಮಾಡುತ್ತಿದೆ’ ಎಂದು ರಾವ್ ಆರೋಪಿಸಿದರು.  ಶೂ ದಾಳಿಯನ್ನು ಖಂಡಿಸಿದ ರಾವ್, ‘ಕಾಂಗ್ರೆಸ್ ಮನೋಸ್ಥಿತಿಯನ್ನು ವ್ಯಕ್ತಪಡಿಸಲು ಆ ವ್ಯಕ್ತಿ ಇಲ್ಲಿಗೆ ಬಂದಿದ್ದ’ ಎಂದು ಹೇಳಿದ್ದಾರೆ. 2009ರ ಚುನಾವಣೆಯಲ್ಲಿ ಶೂ ಎಸೆತದ ಘಟನೆಗಳು ನಡೆದಿದ್ದವು. ಸಿಖ್ ವಿರೋಧಿ ದಂಗೆಯ ಆರೋಪಿಗಳಾದ ಸಜ್ಜನ್ ಕುಮಾರ್ ಮತ್ತು ಜಗದೀಶ್ ಟೈಟ್ಲರ್ ಅವರಿಗೆ ಟಿಕೆಟ್ ನೀಡಿದ್ದನ್ನು ವಿರೋಧಿಸಿ ಕಾಂಗ್ರೆಸ್ ಮುಖಂಡ ಪಿ. ಚಿದಂಬರಂ ಅವರ ಮೇಲೆ ಪತ್ರಕರ್ತ ಜರ್ನೈಲ್ ಸಿಂಗ್ ಎಂಬಾತ ಶೂ ಎಸೆದಿದ್ದ. 

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 1

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !