ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಕೃಷಿ ಸಾಲ ಮನ್ನಾ ಘೋಷಿಸಿದ ಕಮಲನಾಥ್

ಮಧ್ಯಪ್ರದೇಶದ ರೈತರಿಗೆ ನೂತನ ಮುಖ್ಯಮಂತ್ರಿ ಸಿಹಿ ಸುದ್ದಿ
Last Updated 17 ಡಿಸೆಂಬರ್ 2018, 12:48 IST
ಅಕ್ಷರ ಗಾತ್ರ

ಭೋಪಾಲ್: ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬೆನ್ನಲ್ಲೇ ಅಲ್ಪಾವಧಿ ಕೃಷಿ ಸಾಲ ಮನ್ನಾಗೆ ಸಂಬಂಧಿಸಿದ ಆದೇಶಕ್ಕೆ ಕಮಲನಾಥ್ ಸಹಿ ಹಾಕಿದ್ದಾರೆ.

ರಾಷ್ಟ್ರೀಕೃತ ಮತ್ತು ಸಹಕಾರಿ ಬ್ಯಾಂಕುಗಳಿಂದ 2018ರ ಮಾರ್ಚ್‌ 31ರ ಮೊದಲು ಸಾಲ ಪಡೆದ ರೈತರ ಅಲ್ಪಾವಧಿ ಸಾಲ ಮನ್ನಾ ಆಗಲಿದೆ ಎಂದು ಮುಖ್ಯ ಕಾರ್ಯದರ್ಶಿ ರಾಜೇಶ್ ರಾಜೊರಾ ತಿಳಿಸಿದ್ದಾರೆ. ಅಧಿಕಾರಕ್ಕೆ ಬಂದ 10 ದಿನಗಳ ಒಳಗಾಗಿ ಕೃಷಿ ಸಾಲ ಮನ್ನಾ ಮಾಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಘೋಷಿಸಿತ್ತು.

ಡಿಸೆಂಬರ್‌ 11ರಂದು ಚುನಾವಣಾ ಫಲಿತಾಂಶ ಪ್ರಕಟಗೊಂಡ ಬೆನ್ನಲ್ಲೇ ಛತ್ತೀಸಗಡ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಶೀಘ್ರ ಕೃಷಿ ಸಾಲ ಮನ್ನಾ ಮಾಡಲಾಗುವುದು ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಹೇಳಿದ್ದರು.

ಕಮಲನಾಥ್ ಕೃಷಿ ಸಾಲ ಮನ್ನಾ ಘೋಷಿಸಿರುವ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದು, ‘ಮಧ್ಯಪ್ರದೇಶದ ಮುಖ್ಯಮಂತ್ರಿ ಕೃಷಿ ಸಾಲ ಮನ್ನಾ ಮಾಡಿದ್ದಾರೆ. ಒಂದು ಭರವಸೆ ಈಡೇರಿಸಲಾಗಿದೆ. ಎರಡನೆಯದ್ದು ಆಗಬೇಕಿದೆ’ ಎಂದು ಬರೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT