ಬುಧವಾರ, ಜುಲೈ 6, 2022
22 °C

ಎಎಪಿ ಶಾಸಕ ನರೇಶ್ ಯಾದವ್ ಬೆಂಗಾವಲು ವಾಹನದ ಮೇಲೆ ಗುಂಡಿನ ದಾಳಿ, ಓರ್ವ ಸಾವು  

ಪಿಟಿಐ  Updated:

ಅಕ್ಷರ ಗಾತ್ರ : | |

Naresh yadav

ನವದೆಹಲಿ: ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಸಂಭ್ರಮಾಚರಣೆ ಮಾಡುತ್ತಿರುವ ಹೊತ್ತಿನಲ್ಲೇ ಪಕ್ಷದ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ ದುಷ್ಕರ್ಮಿಗಳು  ಮಂಗಳವಾರ ರಾತ್ರಿ ಗುಂಡಿನ  ದಾಳಿ ನಡೆಸಿದ್ದಾರೆ.

ಮಹರೌಲಿ ಶಾಸಕ ನರೇಶ್ ಯಾದವ್ ಮತ್ತು ಆತನ ಬೆಂಬಲಿಗರು ತಮ್ಮ ಚುನಾವಣಾ ಕ್ಷೇತ್ರದಲ್ಲಿರುವ ದೇವಾಲಯಕ್ಕೆ ಹೋಗಿ ಪ್ರಾರ್ಥಿಸಿ ಹಿಂತಿರುಗುತ್ತಿದ್ದರು. ನೈಋತ್ಯ ದೆಹಲಿಯ ಕೃಷ್ಣಾಗಡ್ ಗ್ರಾಮದಲ್ಲಿ ಇವರು  ಸಂಚರಿಸುತ್ತಿದ್ದ ವಾಹನದ ಮೇಲೆ ದುಷ್ಕರ್ಮಿಗಳು ಏಳು ಸುತ್ತು ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಓರ್ವ ಸಾವಿಗೀಡಾಗಿದ್ದು, ಇನ್ನೊಬ್ಬರಿಗೆ ಗಾಯಗಳಾಗಿವೆ. ಗಾಯಗೊಂಡ ವ್ಯಕ್ತಿಯನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದಿದ್ದಾರೆ ಪೊಲೀಸರು. 

ಗುಂಡಿನ ದಾಳಿಯಲ್ಲಿ ಪಕ್ಷದ ಕಾರ್ಯಕರ್ತ ಅಶೋಕ್ ಮನ್ ಎಂಬವರು ಸಾವಿಗೀಡಾಗಿದ್ದಾರೆ ಎಂದು ಎಎಪಿ ನಾಯಕ ಸಂಜಯ್ ಸಿಂಗ್ ಟ್ವೀಟಿಸಿದ್ದಾರೆ.

ಮಹರೌಲಿಯಲ್ಲಿ ಶಾಸಕ ನರೇಶ್ ಯಾದವ್ ಅವರ ಬೆಂಗಾವಲು ವಾಹನದ ಮೇಲೆ  ನಡೆದ ದಾಳಿಯಲ್ಲಿ ಅಶೋಕ್ ಮನ್ ಹತ್ಯೆಯಾಗಿದ್ದಾರೆ. ನರೇಶ್ ಯಾದವ್ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದರು ಎಂದು ಸಿಂಗ್ ಟ್ವೀಟ್‌ ಮಾಡಿದ್ದಾರೆ. 

ಎಎಪಿ ಶಾಸಕ ಮತ್ತು ಕಾರ್ಯಕರ್ತರು ದೇವಸ್ಥಾನಕ್ಕೆ ಹೋಗಿ ಹಿಂತಿರುತ್ತಿದ್ದ ವೇಳೆ ಗುಂಡಿನ ದಾಳಿ ನಡೆದಿದೆ. ಒಬ್ಬ ವ್ಯಕ್ತಿ ಗುಂಡಿಗೆ ಬಲಿಯಾಗಿದ್ದು ಇನ್ನೊಬ್ಬ ವ್ಯಕ್ತಿಗೆ ಗಾಯಗಳಾಗಿವೆ ಎಂದು ಎಎಪಿ ಟ್ವೀಟಿಸಿದೆ.

ಎಎಪಿ ಶಾಸಕ  ನರೇಶ್ ಯಾದವ್ ಮತ್ತು ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿ ದೇವಸ್ಥಾನಕ್ಕೆ ಹೋಗಿ ಮರಳುತ್ತಿದ್ದಾಗ ಗುಂಡಿನ ದಾಳಿ ನಡೆದಿದೆ.  ದಾಳಿಯಲ್ಲಿ ಅಶೋಕ್ ಮನ್ ಎಂಬ ಕಾರ್ಯಕರ್ತ ಸಾವಿಗೀಡಾಗಿದ್ದು, ಹರೇಂದ್ರ ಅವರಿಗೆ  ಗಾಯವಾಗಿದೆ. ಅವರನ್ನು ಫೋರ್ಟೀಸ್ ಆಸ್ಪತ್ರೆಗೆ ದಾಖಲಿಸಿದ್ದು ಪ್ರಾಣಪಾಯದಿಂದ ಪಾರಾಗಿದ್ದಾರೆ ಎಂದು ಆಮ್ ಆದ್ಮಿ ಪಕ್ಷದ ಸಾಮಾಜಿಕ ಮಾಧ್ಯಮದ ಉಸ್ತುವಾರಿ ಅಂಕಿತ್ ಲಾಲ್ ಟ್ವೀಟ್ ಮಾಡಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು