ನವದೆಹಲಿ:‘ಶ್ರಮಿಕ್ ವಿಶೇಷ ರೈಲಿನ ಹೆಸರಿನಲ್ಲಿ ರಾಜಕೀಯ ಮಾಡುವುದನ್ನು ನಿಲ್ಲಿಸಿ’ ಎಂದುಅಖಿಲ ಭಾರತ ರೈಲ್ವೆ ನೌಕರರ ಒಕ್ಕೂಟ, ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಗುರುವಾರ ಮನವಿ ಮಾಡಿದೆ.

ಈ ಸಂಬಂಧ ಸೋನಿಯಾ ಗಾಂಧಿ ಅವರಿಗೆ ಪತ್ರ ಬರೆದಿರುವ ಒಕ್ಕೂಟ, ‘ನಿಲ್ದಾಣಗಳಲ್ಲಿ ಜನದಟ್ಟಣೆಯ ನಿಯಂತ್ರಣಕ್ಕಾಗಿ ರೈಲ್ವೆ ಶುಲ್ಕ ವಿಧಿಸುತ್ತಿದೆ’ ಎಂದು ಸ್ಪಷ್ಟಪಡಿಸಿದೆ.

‘ವಲಸಿಗರನ್ನು ಅವರ ತವರೂರಿಗೆ ಮರಳಲು ಅನುವು ಮಾಡಿಕೊಟ್ಟ ಉತ್ತಮ ವ್ಯವಸ್ಥೆಯನ್ನು ಅಲ್ಪಾವಧಿಯ ರಾಜಕೀಯ ಲಾಭಕ್ಕಾಗಿ ಅಸ್ಥಿರಗೊಳಿಸಲು ಪ್ರಯತ್ನಿಸಬೇಡಿ ಎಂದು ವಿನಂತಿಸುತ್ತೇನೆ’ ಎಂದು ಒಕ್ಕೂಟದಪ್ರಧಾನ ಕಾರ್ಯದರ್ಶಿ ಶಿವ ಗೋಪಾಲ್ ಮಿಶ್ರಾ ಹೇಳಿದ್ದಾರೆ.

‘ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ ಪ್ರಯಾಣಿಸುವುದು ಅಪಾಯಕಾರಿ. ಆದರೆ, ಸಿಬ್ಬಂದಿ ತಮ್ಮ ಕಠಿಣ ಪರಿಶ್ರಮದ ಮೂಲಕ ಅದನ್ನು ಸಾಧ್ಯವಾಗಿಸಿದ್ದಾರೆ’ ಎಂದು ಅವರು ಹೇಳಿದ್ದಾರೆ.

ವಲಸೆ ಕಾರ್ಮಿಕರಿಗೆ ರೈಲು ಟಿಕೆಟ್ ಶುಲ್ಕ ವಿಧಿಸಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಕಿಡಿಕಾರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.