ಗುರುವಾರ , ಆಗಸ್ಟ್ 22, 2019
25 °C

ಸುಷ್ಮಾ ಸ್ಮರಾಜ್‌ ನಿಧನ: ಸಂಜೆ ಅಂತ್ಯಕ್ರಿಯೆ 

Published:
Updated:

ನವದೆಹಲಿ: ಹೃದಯಸ್ತಂಭನದಿಂದ ನಿಧನರಾದ ಕೇಂದ್ರದ ಮಾಜಿ ಸಚಿವೆ, ಬಿಜೆಪಿ ಹಿರಿಯ ನಾಯಕಿ ಸುಷ್ಮಾ ಸ್ವರಾಜ್‌ ಅವರ ಅಂತ್ಯಕ್ರಿಯೆ ಬುಧವಾರ ಸಂಜೆ ನೆರವೇರಲಿದೆ ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ. 

ಇದನ್ನೂ ಓದಿ: ಸುಷ್ಮಾ ಸ್ವರಾಜ್‌ ನಿಧನಕ್ಕೆ ಗಣ್ಯರ ಕಂಬನಿ

ಸುಷ್ಮಾ ಸ್ವರಾಜ್‌  ಪಾರ್ಥೀವ ಶರೀರ ಅವರ ನಿವಾಸದಲ್ಲಿದ್ದು ಗಣ್ಯ ವ್ಯಕ್ತಿಗಳ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. 11 ಗಂಟೆ ಸುಮಾರಿಗೆ ಪಾರ್ಥಿವ ಶರೀರವನ್ನು ಬಿಜೆಪಿ ಕಚೇರಿಗೆ ತರಲಾಗುವುದು ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ಅಲ್ಲಿ ಮೂರು ಗಂಟೆಗಳಿಗೂ ಹೆಚ್ಚು ಕಾಲ ಸಾರ್ವಜನಿಕರು ಹಾಗೂ ಪಕ್ಷದ ಕಾರ್ಯಕರ್ತರ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗುವುದು. 3 ಗಂಟೆಯ ಬಳಿಕ ಮೆರವಣಿಗೆ ಮೂಲಕ ಚಿತಾಗಾರಕ್ಕೆ ತೆಗೆದುಕೊಂಡು ಹೋಗಿ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ಸುಷ್ಮಾ ಸ್ವರಾಜ್‌ ಕುಟುಂಬ ಮೂಲಗಳು ಹೇಳಿವೆ. 

ಇದನ್ನೂ ಓದಿ: ಸೋತರೂ ಪರವಾಗಿಲ್ಲ, ಪ್ರತಿ ವರ್ಷ ವರಮಹಾಲಕ್ಷ್ಮಿ ಪೂಜೆಗೆ ಬರುವೆ: ಸುಷ್ಮಾ ಸ್ವರಾಜ್

Post Comments (+)