2024ಕ್ಕೂ ಏಕಕಾಲಕ್ಕೆ ಚುನಾವಣೆ ಕಷ್ಟ: ನಿತೀಶ್‌

7

2024ಕ್ಕೂ ಏಕಕಾಲಕ್ಕೆ ಚುನಾವಣೆ ಕಷ್ಟ: ನಿತೀಶ್‌

Published:
Updated:

ಪಟ್ನಾ: ‘ದೇಶದಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಸುವುದು, 2019ಕ್ಕೆ ಮಾತ್ರವಲ್ಲ, 2024ಕ್ಕೂ ಕಾರ್ಯರೂಪಕ್ಕೆ ಬರುವುದು ಕಷ್ಟ’ ಎಂದು ಜೆಡಿಯು ಮುಖಂಡ, ಬಿಹಾರ ಮುಖ್ಯಮಂತ್ರಿ ನಿತೀಶ್‌ಕುಮಾರ್‌ ಸೋಮವಾರ ಅಭಿಪ್ರಾಯಪಟ್ಟಿದ್ದಾರೆ. 

ಆದರೆ, ಭಾನುವಾರ ನಡೆದ ಜೆಡಿಯು ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ‘ದೇಶದಲ್ಲಿ ಲೋಕಸಭಾ ಮತ್ತು ವಿಧಾನಸಭೆಗಳಿಗೆ ಏಕಕಾಲಕ್ಕೆ ಚುನಾವಣೆ’ ನಡೆಸುವ ನಿರ್ಧಾರ ಬೆಂಬಲಿಸಿ ನಿರ್ಣಯ ಅಂಗೀಕರಿಸಲಾಗಿತ್ತು. 

‘ಸಂಸತ್‌ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಈ ಕುರಿತು ಸಾಂವಿಧಾನಾತ್ಮಕ ತಿದ್ದುಪಡಿ ಕೈಗೊಳ್ಳಬೇಕಾಗುತ್ತದೆ. ಪ್ರಜಾಪ್ರತಿನಿಧಿ ಕಾಯ್ದೆಯಲ್ಲಿನ ಹಲವು ನಿಯಮಗಳನ್ನು ಬದಲಿಸಬೇಕಾಗುತ್ತದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು ಹೆಚ್ಚು ಸಮಯ ಬೇಕಾಗುತ್ತದೆ’ ಎಂದು ಅವರು ಹೇಳಿದ್ದಾರೆ. 

ಭಿನ್ನಾಭಿಪ್ರಾಯವಿಲ್ಲ: 

2019ರ ಲೋಕಸಭಾ ಚುನಾವಣೆಯ ಸೀಟು ಹಂಚಿಕೆ ಸಂಬಂಧ ಜೆಡಿಯು ಜೊತೆಗೆ ಭಿನ್ನಾಭಿಪ್ರಾಯವಿದೆ ಎಂಬುದನ್ನು ಅಲ್ಲಗಳೆದಿರುವ ಬಿಜೆಪಿ ನಾಯಕರು, ‘ಈ ಬಗ್ಗೆ ಬಿಜೆಪಿ ಹಾಗೂ ಜೆಡಿಯು ನಡುವಣ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಉಭಯ ಪಕ್ಷಗಳು ಒಗ್ಗೂಡಿಯೇ ಚುನಾವಣೆ ಎದುರಿಸಲಿವೆ’ ಎಂದು ಬಿಜೆಪಿ ನಾಯಕರು ಹೇಳಿದ್ದಾರೆ. 

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !