ಶನಿವಾರ, ಫೆಬ್ರವರಿ 22, 2020
19 °C

ಭಾರತ್ ಪೆಟ್ರೋಲಿಯಂ, ಏರ್ ಇಂಡಿಯಾ ಮಾರ್ಚ್ ಒಳಗೆ ಮಾರಾಟವಾಗುವ ನಿರೀಕ್ಷೆ: ನಿರ್ಮಲಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಸಾಲದ ಸುಳಿಯಲ್ಲಿ ಸಿಲುಕಿರುವ ಏರ್‌ ಇಂಡಿಯಾ, ಭಾರತ್ ಪೆಟ್ರೋಲಿಯಂ ಕಾರ್ಪೊರೇಷನ್ ಸಂಸ್ಥೆಗಳು ಮುಂದಿನ ಮಾರ್ಚ್‌ ಮಾರಾಟವಾಗುವ ನಿರೀಕ್ಷೆ ಇದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.

ಟೈಮ್ಸ್ ಅಫ್ ಇಂಡಿಯಾ ಪತ್ರಿಕೆಗೆ ನೀಡಿರುವ ಸಂದರ್ಶನದಲ್ಲಿ ಈ ಹೇಳಿಕೆ ನೀಡಿರುವ ಅವರು, ಈಗಾಗಲೇ ಈ ಎರಡೂ ಸಂಸ್ಥೆಗಳು ಭಾರಿ ನಷ್ಟ ಅನುಭವಿಸುತ್ತಿದ್ದು, ಸಾಲದ ಹೊರೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ.

ಏರ್ ಇಂಡಿಯಾ ವಿಮಾನ ಯಾನ ಸಂಸ್ಥೆಯಲ್ಲಿ ಮಾರಾಟಕ್ಕೆ ಇದ್ದ ತಾಂತ್ರಿಕ ಸಮಸ್ಯೆಯನ್ನು ಪರಿಹರಿಸಲಾಗಿದೆ. ಇದೇ ವರ್ಷದಲ್ಲಿ ಕರೆಯಲಾಗಿದ್ದ ಬಿಡ್ನಲ್ಲಿ ಸಂಸ್ಥೆಯನ್ನು ಖರೀದಿಸಲು ಹಲವು ಹೂಡಿಕೆದಾರರು ಮುಂದೆ ಬಂದಿರುವುದಾಗಿ ಅವರು ಹೇಳಿದ್ದಾರೆ.

ಈ ಏರಡು ಸರ್ಕಾರಿ ಸಂಸ್ಥೆಗಳ ಮೇಲೆ ₹58000 ಕೋಟಿ ಸಾಲದ ಹೋರೆ ಇದೆ ಈ ಹಿನ್ನೆಲೆಯಲ್ಲಿ ಸಚಿವರ ಹೇಳಿಕೆ ಮಹತ್ವ ಪಡೆದಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು