ಕೋಲ್ಕತ್ತಾದ ಮಲ್ಟಿಪ್ಲೆಕ್ಸ್‌ನಲ್ಲಿ ದಾಂದಲೆ: 6 ಮಂದಿ ಬಂಧನ

7

ಕೋಲ್ಕತ್ತಾದ ಮಲ್ಟಿಪ್ಲೆಕ್ಸ್‌ನಲ್ಲಿ ದಾಂದಲೆ: 6 ಮಂದಿ ಬಂಧನ

Published:
Updated:

ಕೋಲ್ಕತ್ತಾ: ‘ಆಕ್ಸಿಡೆಂಟಲ್‌ ಪ್ರೈಮ್‌ ಮಿನಿಸ್ಟರ್‌’ ಸಿನಿಮಾ ಬಿಡುಗಡೆ ವಿರೋಧಿಸಿ ಇಲ್ಲಿನ ಮಲ್ಟಿಪ್ಲೆಕ್ಸ್ ಚಿತ್ರಮಂದಿರದೊಳಗೆ ಪ್ರತಿಭಟನೆ ನಡೆಸಿ ದಾಂದಲೆ ಮಾಡಿದ ಆರು ಮಂದಿಯನ್ನು ಪೊಲೀಸರು ಶನಿವಾರ ಬಂಧಿಸಿದ್ದಾರೆ.

ನಗರದ ಹಲವು ಮಲ್ಟಿಪ್ಲೆಕ್ಸ್‌ ಚಿತ್ರಮಂದಿರಗಳಲ್ಲಿ ಶುಕ್ರವಾರ ಯೂತ್‌ಕಾಂಗ್ರೆಸ್‌ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಆದರೆ, ಯೂತ್‌ ಕಾಂಗ್ರೆಸ್‌ ನಾಯಕರು, ಪ್ರತಿಭಟನೆ ನಡೆಸಿದವರು ನಮ್ಮ ಕಾರ್ಯಕರ್ತರಲ್ಲವೆಂದು ಅಲ್ಲಗಳೆದಿದ್ದಾರೆ.

ಬಂಧಿತರು ಚಿತ್ರಮಂದಿರಗಳಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಇವರ ಮೇಲೆ ಕಾನೂನು ಪ್ರಕಾರ ಕ್ರಮ ಕೈಗೊಳ್ಳುತ್ತೇವೆ ಎಂದು ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಲೋಕಸಭೆ ಚುನಾವಣೆ ದೃಷ್ಟಿಯಲ್ಲಿಟ್ಟುಕೊಂಡು ಈ ಸಿನಿಮಾ ಬಿಡುಗಡೆ ಮಾಡಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !