ಭಾನುವಾರ, ನವೆಂಬರ್ 17, 2019
27 °C

ಎನ್‌ಆರ್‌ಸಿ: ಜೂನ್‌ 30ರವರೆಗೆ ಗಡುವು

Published:
Updated:

ನವದೆಹಲಿ: ಅಸ್ಸಾಂನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಪರಿಷ್ಕೃತ ಪಟ್ಟಿಯನ್ನು ಅಂತಿಮಗೊಳಿಸಲು ನೀಡಿದ್ದ ಗಡುವನ್ನು ಕೇಂದ್ರ ಸರ್ಕಾರ ಆರು ತಿಂಗಳವರೆಗೆ ವಿಸ್ತರಿಸಿದೆ.

ಎನ್‌ಆರ್‌ಸಿ ಪ್ರಕ್ರಿಯೆ ಅಂತಿಮಗೊಳಿಸಲು ಡಿಸೆಂಬರ್‌ 31ರವರೆಗೆ ಗಡುವು ನೀಡಲಾಗಿತ್ತು. ಆದರೆ ಈ ಅವಧಿಯೊಳಗೆ ಪ್ರಕ್ರಿಯೆ ಅಂತಿಮಗೊಳಿಸಲು ಸಾಧ್ಯವಾಗದ ಕಾರಣ ಜೂನ್‌ 30ರವರೆಗೆ ಗಡುವು ವಿಸ್ತರಿಸಲಾಗಿದೆ ಎಂದು ರಿಜಿಸ್ಟ್ರಾರ್ ಜನರಲ್ ಆಫ್ ಇಂಡಿಯಾ ಪ್ರಕಟಣೆಯಲ್ಲಿ ತಿಳಿಸಿದೆ. 

ಮೂರು ವರ್ಷಗಳಲ್ಲಿ ಎನ್‌ಆರ್‌ಸಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ 2013ರಲ್ಲಿ ಸರ್ಕಾರ ಮೊದಲ ಬಾರಿಗೆ ಅಧಿಸೂಚನೆ ಹೊರಡಿಸಿತ್ತು. ಅಲ್ಲಿಂದ ಇಲ್ಲಿಯವರೆಗೆ ಮೂರು ಬಾರಿ ಗಡುವು ವಿಸ್ತರಿಸಲಾಗಿದೆ. ಆದರೂ, ಇದುವರೆಗೆ ನೋಂದಣಿ ಪ್ರಕ್ರಿಯೆ ಅಂತಿಮಗೊಂಡಿಲ್ಲ.

ಪ್ರತಿಕ್ರಿಯಿಸಿ (+)