ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅನಂತನಾಗ್‌ ಎನ್‌ಕೌಂಟರ್‌ನಲ್ಲಿ ಎಲ್‌ಇಟಿ ಮುಖಂಡ ಸೇರಿ ಆರು ಉಗ್ರರು ಬಲಿ

Last Updated 23 ನವೆಂಬರ್ 2018, 7:14 IST
ಅಕ್ಷರ ಗಾತ್ರ

ಶ್ರೀನಗರ:‌ಜಮ್ಮು ಮತ್ತು ಕಾಶ್ಮೀರದ ಅನಂತನಾಗ್‌ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಭದ್ರತಾಪಡೆ ಶುಕ್ರವಾರ ಬೆಳ್ಳಂಬೆಳಿಗ್ಗೆ ನಡೆಸಿದ ಎನ್‌ಕೌಂಟರ್‌ನಲ್ಲಿ ಲಷ್ಕರ್–ಇ–ತೊಯ್ಬಾ(ಎಲ್‌ಇಟಿ) ಸಂಘಟನೆ ಮುಖಂಡ ಆಜದ್ ಅಹ್ಮದ್‌ ಮಲಿಕ್‌ ಸೇರಿದಂತೆಆರು ಉಗ್ರರು ಬಲಿಯಾಗಿದ್ದಾರೆ.

ಘಟನಾ ಸ್ಥಳದಲ್ಲಿ ಉಗ್ರರ ಬಳಿ ಇದ್ದ ಬಂದೂಕು, ಮದ್ದು–ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ.

ಶ್ರೀನಗರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಬಿಜ್ಬಾರದ ಅರಣ್ಯ ಪ್ರದೇಶದಲ್ಲಿ ಉಗ್ರರನ್ನು ಭದ್ರತಾಪಡೆ ಹೊಡೆದುರುಳಿಸಿದೆ.

ವರ್ಷದ ಯಶಸ್ವಿ ಕಾರ್ಯಾಚರಣೆ

ಈ ವರ್ಷದ ಅತ್ಯಂತ ಯಶಸ್ವಿ ಹಾಗೂ ಮಹತ್ವದ ಕಾರ್ಯಾಚರಣೆ ಇದಾಗಿದ್ದು, 6 ಉಗ್ರರನ್ನು ಹತ್ಯೆಗೈಯಲಾಗಿದೆ. ಕಳೆದ ರಾತ್ರಿ ಕಾರ್ಯಾಚರಣೆ ಕೈಗೊಳ್ಳಲಾಗಿತ್ತು. ಸ್ಥಳದಲ್ಲಿ ಆರು ರೈಫಲ್‌ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಟ್ವೀಟ್‌ ಮಾಡಿದೆ.

ಅರಣ್ಯದಲ್ಲಿ ಇನ್ನೂ ಭಯೋತ್ಪಾದಕರು ಅವಿತಿರುವ ಬಗ್ಗೆ ಮಾಹಿತಿ ಇದ್ದು, ಕಾರ್ಯಾಚರಣೆ ಮುಂದುವರಿದೆ ಪೊಲೀಸರು ತಿಳಿಸಿದ್ದಾರೆ.

ಮುನ್ನೆಚ್ಚರಿಕೆ ಕ್ರಮವಾಗಿ ಅನಂತನಾಗ್ ಜಿಲ್ಲೆಯಲ್ಲಿ ಮೊಬೈಲ್‌ ಇಂಟರ್‌ನೆಟ್‌ ಸೇವೆಗಳನ್ನು ಅಧಿಕಾರಿಗಳು ಸ್ಥಗಿತಗೊಳಿಸಿದ್ದಾರೆ.

Anantnag encounter #UPDATE: Six terrorists have been killed in the encounter. Arms and ammunition recovered. Operation continues #JammuAndKashmir pic.twitter.com/AwZ2fM90HF

ಹತ್ಯೆಯಾದಎಲ್‌ಇಟಿಸಂಘಟನೆ ಮುಖಂಡ ಆಜದ್ ಅಹ್ಮದ್‌ ಮಲಿಕ್‌ ಶವವನ್ನು ಗ್ರಾಮಕ್ಕೆ ತರಲಾಗಿದೆ. ವಿಡಿಯೊ: ವಿಎನ್‌ಎಸ್‌

ಶೊಪಿಯಾನ್ ಜಿಲ್ಲೆಯಲ್ಲಿ ಮೂರು ದಿನದ ಹಿಂದೆ ನಡೆದ ಎನ್‌ಕೌಂಟರ್‌ನಲ್ಲಿ ಮೂವರು ಉತ್ರರನ್ನು ಹತ್ಯೆ ಮಾಡಲಾಗಿತ್ತು. ಈ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿ, ಮೂವರು ಯೋಧರು ಗಾಯಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT