ವಾವರ್‌ ಮಸೀದಿಗೆ ತೆರಳಲು ಯತ್ನ: ಮೂವರು ಮಹಿಳೆಯರು ಸೇರಿ ಆರು ಮಂದಿಯ ಬಂಧನ

7
ಶಬರಿಮಲೆ ಸಮೀಪದ ಎರುಮೇಲಿಯಲ್ಲಿರುವ ಮಸೀದಿ

ವಾವರ್‌ ಮಸೀದಿಗೆ ತೆರಳಲು ಯತ್ನ: ಮೂವರು ಮಹಿಳೆಯರು ಸೇರಿ ಆರು ಮಂದಿಯ ಬಂಧನ

Published:
Updated:

ಪಾಲಕ್ಕಾಡ್‌: ಶಬರಿಮಲೆ ಅಯ್ಯಪ್ಪ ದೇಗುಲ ಸಮೀಪದ ಎರುಮೇಲಿಯಲ್ಲಿನ ವಾವರ್ ಮಸೀದಿಗೆ ಭೇಟಿ ನೀಡಲು ಹೊರಟಿದ್ದ ಮೂವರು ಮಹಿಳೆಯರು ಸೇರಿದಂತೆ ಒಟ್ಟು ಆರು ಜನರನ್ನು ಬಂಧಿಸಲಾಗಿದೆ. ಧಾರ್ಮಿಕ ಗುಂಪುಗಳ ನಡುವೆ ದ್ವೇಷ ಸೃಷ್ಟಿಸಲು ಈ  ಆರೂ ಜನ ಯತ್ನಿಸುತ್ತಿದ್ದರು ಎಂಬ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಸೋಮವಾರ ಬಂಧಿಸಿರುವ ಆರು ಮಂದಿಯನ್ನು ಮಂಗಳವಾರ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಎಲ್ಲಾ ಆರು ಜನ ತಮಿಳುನಾಡಿನವರಾಗಿದ್ದು, ‘ಹಿಂದೂ ಮಕ್ಕಳ್ ಕಚ್ಚಿ’ ಪಕ್ಷದ ಸದಸ್ಯರು.

ಶಬರಿಮಲೆಗೆ ಬರುವ ಮಾಲಾಧಾರಿಗಳು ಅಯ್ಯಪ್ಪ ದೇಗುಲಕ್ಕೆ ಭೇಟಿ ನೀಡುವ ಮೊದಲು ವಾವರ್‌ ಮಸೀದಿಗೆ ಬಂದು ಹೋಗುತ್ತಾರೆ. ಎರುಮೇಲಿ ನೈನಾರ್ ಜುಮಾ ಮಸೀದಿ ವಾವರ್‌ ಪಲ್ಲಿ (ಮಸೀದಿ) ಎಂದೂ ಪ್ರಸಿದ್ಧಿ. ವಾವರ್ ಅಯ್ಯಪ್ಪ ಸ್ವಾಮಿಯ ಜೊತೆಗಾರನಾಗಿದ್ದ ಎನ್ನಲಾಗಿದೆ.

ನವೆಂಬರ್‌ನಿಂದ– ಜನವರಿವರೆಗೆ ಶಬರಿಮಲೆಗೆ ಬರುವ ಅಯ್ಯಪ್ಪ ಯಾತ್ರಿಗಳು ವಾವರ್ ಮಸೀದಿಗೆ ಪ್ರವೇಶ ಮಾಡುವುದಿಲ್ಲ. ಆದರೆ ಅದಕ್ಕೆ ಸುತ್ತುಹಾಕಿ ಹೋಗುತ್ತಾರೆ. ಕಾಣಿಕೆ ಅರ್ಪಿಸಿ, ಹಣ್ಣುಕಾಯಿ ಒಡೆದು ಪ್ರಾರ್ಥಿಸುತ್ತಾರೆ.

ಬರಹ ಇಷ್ಟವಾಯಿತೆ?

 • 12

  Happy
 • 3

  Amused
 • 3

  Sad
 • 0

  Frustrated
 • 5

  Angry

Comments:

0 comments

Write the first review for this !