ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಣ್ಣ ಉದ್ದಿಮೆಗೆ ಹೆಚ್ಚು ಸಾಲ: ಕೇಂದ್ರದ ಬೇಡಿಕೆಗೆ ಆರ್‌ಬಿಐ ಸಮ್ಮತಿ

ಪಟ್ಟು ಸಡಿಲಿಸಿದ ರಿಸರ್ವ್ ಬ್ಯಾಂಕ್ ಆಫ್‌ ಇಂಡಿಯಾ
Last Updated 20 ನವೆಂಬರ್ 2018, 2:01 IST
ಅಕ್ಷರ ಗಾತ್ರ

ಮುಂಬೈ: ಹಣಕಾಸು ವಲಯಕ್ಕೆ ನಗದು ಹರಿವು ಹೆಚ್ಚಿಸಲು ಮತ್ತು ಸಣ್ಣ ಉದ್ದಿಮೆಗಳಿಗೆ ಸಾಲ ನೀಡಿಕೆ ಪ್ರಮಾಣ ಏರಿಸಲು ಭಾರತೀಯ ರಿಸರ್ವ್‌ ಬ್ಯಾಂಕ್‌ನ ನಿರ್ದೇಶಕ ಮಂಡಳಿಯು ಸಮ್ಮತಿಸಿದೆ.

ಕೇಂದ್ರೀಯ ಬ್ಯಾಂಕ್‌ನ ಮೀಸಲು ನಿಧಿಯ ಪ್ರಮಾಣವನ್ನು ಹೊಸದಾಗಿ ನಿರ್ಧರಿಸಿ, ಹೆಚ್ಚುವರಿ ಹಣವನ್ನು ಸರ್ಕಾರಕ್ಕೆ ವರ್ಗಾಯಿಸುವ ಕುರಿತು ಹೊಸ ನಿಯಮಾವಳಿ ರೂಪಿಸಲು ಪರಿಣತರ ಸಮಿತಿ ರಚಿಸಲು ನಿರ್ಧರಿಸಲಾಗಿದೆ ಎಂದು ಹೇಳಿಕೆಯಲ್ಲಿ ತಿಳಿಸಲಾಗಿದೆ.

ಹಲವು ವಿಷಯಗಳ ಕುರಿತು ಕೇಂದ್ರ ಸರ್ಕಾರದ ಜತೆಗಿನ ತೀವ್ರ ಸ್ವರೂಪದ ಭಿನ್ನಾಭಿಪ್ರಾಯದ ಮಧ್ಯೆಯೇ ಸೋಮವಾರ ಇಲ್ಲಿ ನಡೆದ ನಿರ್ದೇಶಕ ಮಂಡಳಿ ಸಭೆಯು ಸುದೀರ್ಘ 9 ಗಂಟೆವರೆಗೆ ನಡೆಯಿತು.

ಕೇಂದ್ರ ಸರ್ಕಾರದಜತೆಗಿನ ಭಿನ್ನಾಭಿಪ್ರಾಯದಿಂದಾಗಿ ಆರ್‌ಬಿಐ ಗವರ್ನರ್ ಹುದ್ದೆಗೆ ಊರ್ಜಿತ್ ಪಟೇಲ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಈ ಹಿಂದೆ ವರದಿಯಾಗಿತ್ತು. ಈ ನಿಟ್ಟಿನಲ್ಲಿ ನಿರ್ದೇಶಕ ಮಂಡಳಿ ಸಭೆ ಪ್ರಾಮುಖ್ಯ ಪಡೆದಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT