ಲಾಲ್ ಬಹದ್ದೂರ್ ಶಾಸ್ತ್ರಿಗೆ ಪ್ರಿಯಾಂಕ ಗಾಂಧಿಯಿಂದ ಅವಮಾನ: ಸ್ಮೃತಿ ಇರಾನಿ ಆರೋಪ

ನವದೆಹಲಿ: ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅವರು ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಅವಮಾನ ಮಾಡಿದ್ದಾರೆ ಎಂದು ಆರೋಪಿಸಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಟ್ವೀಟ್ ಮಾಡಿದ್ದಾರೆ.
ದೇಶದ ಹೆಮ್ಮೆಯ ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರಿಗೆ ಅವಮಾನ ಮಾಡಿದ್ದಾರೆ. ಹಿರಿಯರಿಗೆ ಅವಮಾನ ಮಾಡುವುದೇ ಕಾಂಗ್ರೆಸ್ ಪಕ್ಷದ ಸಂಸ್ಕೃತಿ ಎಂದು ಟ್ವೀಟ್ ಮಾಡಿದ್ದಾರೆ.
मुंडी झुकाइएके सर झटकाइएके
गुमान में बिटिया भूल गई मरजाद
आपन गले की उतरन, पहनाए दीहिन
शास्त्री जी के अपमान पर ताली बजाएके, हाथ हिलाइएके
चल दीहलें कांग्रेस बिटिया तोहार pic.twitter.com/ndwT15Y8co— Chowkidar Smriti Z Irani (@smritiirani) March 20, 2019
ಇದಕ್ಕೆ ಪೂರಕವಾಗಿ ಸ್ಮೃತಿ ಇರಾನಿ ಅವರು ತಮ್ಮ ಟ್ವಿಟರ್ ಖಾತೆಯಲ್ಲಿ ವಿಡಿಯೊ ಒಂದನ್ನು ಹಂಚಿಕೊಂಡಿದ್ದಾರೆ. ಚುನಾವಣಾ ಸಮಾವೇಶವೊಂದರಲ್ಲಿ ಭಾಗವಹಿಸಿದ್ದ ಪ್ರಿಯಾಂಕ ಗಾಂಧಿ ಅವರು ಅಭಿಮಾನಿಗಳು ಹಾಕಿದ್ದ ಹೂವಿನ ಹಾರವನ್ನು ತಮ್ಮ ಕೊರಳಿನಿಂದ ತೆಗೆಯುತ್ತಾರೆ. ಬಳಿಕ ಅದೇ ಹಾರವನ್ನು ತೆಗೆದು ಲಾಲ್ ಬಹುದ್ದೂರ್ ಶಾಸ್ತ್ರಿ ಪ್ರತಿಮೆಗೆ ಹಾಕುತ್ತಾರೆ ಎಂಬ ವಿಡಿಯೊವನ್ನು ಟ್ವೀಟ್ ಮಾಡಿದ್ದಾರೆ.
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳ ನಡುವೆ ವಾಕ್ಸಮರ ಜೋರಾಗಿ ನಡೆಯುತ್ತಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.