ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬಾಲ್ಯ ವಿವಾಹ | ಕಾನೂನು ತಿದ್ದುಪಡಿಗೆ ಚಿಂತನೆ: ಸಚಿವೆ ಇರಾನಿ

ವರದಿ ಸಲ್ಲಿಕೆ ಕಡ್ಡಾಯ
Last Updated 26 ನವೆಂಬರ್ 2019, 14:11 IST
ಅಕ್ಷರ ಗಾತ್ರ

ನವದೆಹಲಿ: ‘ಬಾಲ್ಯ ವಿವಾಹ ನೆರವೇರಿದ ಮಾಹಿತಿ ಪಡೆದ ಅಧಿಕಾರಿಗಳು, ಅವುಗಳ ಕುರಿತು ವರದಿ ಸಲ್ಲಿಸುವುದನ್ನು ಕಡ್ಡಾಯಗೊಳಿಸಲು ಸರ್ಕಾರ ಚಿಂತನೆ ನಡೆಸುತ್ತಿದೆ’ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಸ್ಮೃತಿ ಇರಾನಿ ಹೇಳಿದ್ದಾರೆ.

ಸಂಸತ್‌ನಲ್ಲಿ ಮಂಗಳವಾರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಈ ಸಂಬಂಧ ಬಾಲ್ಯ ವಿವಾಹ ತಡೆ ಕಾಯ್ದೆಗೆ ತಿದ್ದುಪಡಿ ತರಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು.

‘ಬಾಲ್ಯ ವಿವಾಹಕ್ಕೊಳಗಾದ ಬಾಲಕಿಯರು ಗರ್ಭಧರಿಸುತ್ತಿರುವ ಪ್ರಮಾಣ ಶೇ 21ರಷ್ಟಿದೆ. ಅಲ್ಲದೇ, ಇಂತಹ ಗರ್ಭಿಣಿಯರಿಗೆ ಜನಿಸುವ ಮಕ್ಕಳಲ್ಲಿ ಅಪೌಷ್ಟಿಕತೆ ಪ್ರಮಾಣವೂ ಹೆಚ್ಚು ಎಂಬುದು ಅಧ್ಯಯನದಿಂದ ತಿಳಿದು ಬಂದಿದೆ’ ಎಂದು ಸಚಿವೆ ಇರಾನಿ ಸದನಕ್ಕೆ ವಿವರಿಸಿದರು.

‘ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದ ಸಂದರ್ಭದಲ್ಲಿ, ಸಂಬಂಧಪಟ್ಟ ಇಲಾಖೆಗಳಿಗೆ ಮಾಹಿತಿ ನೀಡುವುದು ಕಡ್ಡಾಯ. ಪಾಲಕರು, ವೈದ್ಯರು, ಶಾಲಾ ಸಿಬ್ಬಂದಿಗೂ ಈ ನಿಯಮ ಅನ್ವಯವಾಗುತ್ತದೆ. ಇದೇ ಮಾದರಿಯಲ್ಲಿ ಬಾಲ್ಯ ವಿವಾಹ ತಡೆ ಕಾಯ್ದೆಗೂ ತಿದ್ದುಪಡಿ ತರುವುದು ಅವಶ್ಯ’ ಎಂದು ಪ್ರತಿಪಾದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT