ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕ್ಕಬಳ್ಳಾಪುರ: ಮತಗಟ್ಟೆಗಳ ಪ್ರಯಾಣ ಬೆಳೆಸಿದ ಅಧಿಕಾರಿಗಳು

Last Updated 11 ಮೇ 2018, 7:04 IST
ಅಕ್ಷರ ಗಾತ್ರ

ಚಿಕ್ಕಬಳ್ಳಾಪುರ: ವಿಧಾನಸಭೆ ಚುನಾವಣೆಗೆ ನಿಯೋಜಿತ ಅಧಿಕಾರಿಗಳು ಮತ್ತು ಸಿಬ್ಬಂದಿ ಶುಕ್ರವಾರ ಬೆಳಿಗ್ಗೆ ಸಂಬಂಧಪಟ್ಟ ಮಸ್ಟರಿಂಗ್ (ಮತದಾನದ ಹಿಂದಿನ ದಿನ ಮತಯಂತ್ರಗಳನ್ನು ಇಡುವ ಕೇಂದ್ರ) ಕೇಂದ್ರಕ್ಕೆ ತೆರಳಿ ಅಲ್ಲಿಂದ ಮತ್ರಯಂತ್ರಗಳು ಮತ್ತು ಅಗತ್ಯ ಸಾಮಗ್ರಿಗಳೊಂದಿಗೆ ತಮಗೆ ನಿಗದಿಪಡಿಸಿದ ಮತಗಟ್ಟೆಗಳಿಗೆ ತೆರಳಿದರು.

ಜಿಲ್ಲೆಯಲ್ಲಿ ಮತದಾನಕ್ಕಾಗಿ 14 ಹೆಚ್ಚುವರಿ ಮತಗಟ್ಟೆಗಳು ಸೇರಿದಂತೆ ಒಟ್ಟು 1,269 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 1,419 ಮತಗಟ್ಟೆ ಅಧಿಕಾರಿ, 1,192 ಸಹಾಯಕ ಮತಗಟ್ಟೆ ಅಧಿಕಾರಿ, 4,483 ಮತಗಟ್ಟೆ ಸಿಬ್ಬಂದಿ ಚುನಾವಣೆ ಕರ್ತವ್ಯಕ್ಕೆ ನಿಯೋಜಿಸಲಾಗಿದೆ. ಚುನಾವಣೆ ಸಿಬ್ಬಂದಿಗಳ ಪ್ರಯಾಣಕ್ಕಾಗಿ ಜಿಲ್ಲೆಯಲ್ಲಿ 210 ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ಅನೇಕ ವಾಹನಗಳನ್ನು ಬಳಕೆ ಮಾಡಲಾಗುತ್ತಿದೆ.

ನಿಯೋಜಿತ ಸಿಬ್ಬಂದಿ ಜತೆಗೆ ಅರೆಸೇನಾ ಪಡೆ ಯೋಧರು, ಪೊಲೀಸ್ ಮತ್ತು ಗೃಹ ರಕ್ಷಕ ದಳ ಸಿಬ್ಬಂದಿ ವಾಹನಗಳಲ್ಲಿ ಸಂಬಂಧಪಟ್ಟ ಮತಗಟ್ಟೆಗಳತ್ತ ಪ್ರಯಾಣ ಬೆಳೆಸಿದರು. ತಾಲ್ಲೂಕಿನ ಪ್ರತಿ ಮಸ್ಟರಿಂಗ್ ಕೇಂದ್ರದಲ್ಲಿ ಸಿಬ್ಬಂದಿಗೆ ಉಪಾಹಾರ ಮತ್ತು ಊಟದ ವ್ಯವಸ್ಥೆ ಮಾಡಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT