ಸೋಮವಾರ, 29 ಮೇ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಪಿಯಾನ್‌ನಲ್ಲಿ ಗುಂಡಿನ ಚಕಮಕಿ: ಒಬ್ಬ ಯೋಧ ಹುತಾತ್ಮ, ನಾಲ್ವರು ಉಗ್ರರ ಹತ್ಯೆ

Last Updated 20 ನವೆಂಬರ್ 2018, 4:08 IST
ಅಕ್ಷರ ಗಾತ್ರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್‌ನ ನಾಡಿಗಾಮ್ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ಭದ್ರತಾ ಸಿಬ್ಬಂದಿ ಮತ್ತು ಉಗ್ರರ ಮಧ್ಯೆ ನಡೆದ ಗುಂಡಿನ ಚಕಮಕಿಯಲ್ಲಿ ಒಬ್ಬ ಯೋಧ ಹುತಾತ್ಮರಾಗಿದ್ದು, ನಾಲ್ವರು ಉಗ್ರರನ್ನು ಹತ್ಯೆ ಮಾಡಲಾಗಿದೆ. ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಉಗ್ರರು ಅಡಗಿದ್ದಾರೆ ಎಂಬ ಖಚಿತ ಮಾಹಿತಿ ಮೇರೆಗೆ ಸೇನೆಯ ಪ್ಯಾರಾಟ್ರೂಪರ್ಸ್‌, ರಾಜ್ಯ ಪೊಲೀಸರು ಮತ್ತು ಸಿಆರ್‌ಪಿಎಫ್‌ (ಕೇಂದ್ರ ಮೀಸಲು ಪೊಲೀಸ್ ಪಡೆ) ಯೋಧರು ಜತೆಯಾಗಿ ನಸುಕಿನ ಜಾವ ಶೋಧ ಕಾರ್ಯ ನಡೆಸಿದ್ದಾರೆ. ಈ ವೇಳೆ ಸೇನಾ ಸಿಬ್ಬಂದಿ ಮತ್ತು ಪೊಲೀಸರ ಮೇಲೆ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಚಕಮಕಿ ನಡೆದಿದೆ.

ಶೋಪಿಯಾನ್‌ನಲ್ಲಿ ಈಚೆಗೆ ಉಗ್ರರು ಮತ್ತು ಭದ್ರತಾ ಸಿಬ್ಬಂದಿ ನಡುವಣ ಗುಂಡಿನ ಚಕಮಕಿ ಹೆಚ್ಚಾಗಿದೆ ಎನ್ನಲಾಗಿದೆ. ಭಾನುವಾರವಷ್ಟೇ ಶೋಪಿಯಾನ್‌ನ ರೆಬ್ಬಾನ್‌ ಎಂಬಲ್ಲಿ ಅಲ್–ಬದರ್ ಸಂಘಟನೆಗೆ ಸೇರಿದ ಇಬ್ಬರು ಉಗ್ರರನ್ನು ಭದ್ರತಾ ಸಿಬ್ಬಂದಿ ಹತ್ಯೆ ಮಾಡಿದ್ದರು. ಅದೇ ದಿನ ಪುಲ್ವಾಮದ ಕಾಕಪೊರಾ ಪ್ರದೇಶದ ರೈಲ್ವೆ ಕಾಲೊನಿಯಲ್ಲಿ ಭಯೋತ್ಪಾದಕರು ನಡೆಸಿದ ಗುಂಡಿನ ದಾಳಿಗೆ ಸಿಆರ್‌ಪಿಎಫ್‌ ಯೋಧರೊಬ್ಬರು ಮೃತಪಟ್ಟಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT