ಭಾನುವಾರ, ಆಗಸ್ಟ್ 1, 2021
27 °C

ಪಾಕ್‌ ಗುಂಡಿನ ದಾಳಿ: ಸೈನಿಕ ಹುತಾತ್ಮ

ಪಿಟಿಐ Updated:

ಅಕ್ಷರ ಗಾತ್ರ : | |

ಜಮ್ಮು:  ಪೂಂಚ್‌ ಜಿಲ್ಲೆಯ ಗಡಿ ನಿಯಂತ್ರಣ ರೇಖೆ ಬಳಿ ಪಾಕಿಸ್ತಾನ ಪಡೆಗಳು ಶನಿವಾರ ರಾತ್ರಿ ಗುಂಡಿನ ದಾಳಿ ನಡೆಸಿದ ಕಾರಣ ಸೈನಿಕನೊಬ್ಬ ಹುತಾತ್ಮನಾಗಿದ್ದು ಇಬ್ಬರು ಸೈನಿಕರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪೂಂಚ್‌ ಮತ್ತು ರಜೌರಿ ಅವಳಿ ಜಿಲ್ಲೆಯ ಗಡಿ ಭಾಗದ ಗ್ರಾಮಗಳಲ್ಲಿ ಈ ತಿಂಗಳಲ್ಲಿ ಪಾಕಿಸ್ತಾನದ ಪಡೆಗಳು ನಡೆಸಿದ ಮೂರನೇ ದಾಳಿ ಇದಾಗಿದೆ.

ಷಾಪುರ– ಕೆರ್ನಿ ವಲಯದ ಗಡಿ ಭಾಗದಲ್ಲಿ ಗುಂಡಿನ ದಾಳಿಗೆ ಭಾರತದ ಸೈನಿಕರೂ ಪ್ರತಿ ದಾಳಿ ನಡೆಸಿದರು. ಗುಂಡಿನ ಚಕಮಕಿಯಲ್ಲಿ ಭಾರತದ ಮೂವರು ಸೈನಿಕರು ಗಾಯಗೊಂಡರು. ತಕ್ಷಣ ಇವರನ್ನು ಆಸ್ಪತ್ರೆಗೆ ಸೇರಿಸಲಾಯಿತು. ಆದರೆ ಒಬ್ಬ ಸೈನಿಕ ಸಾವನ್ನಪ್ಪಿದರು ಎಂದು ಅಧಿಕಾರಿಗಳು ಹೇಳಿದ್ದಾರೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು