ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸೋನಿಯಾ, ಕಾಂಗ್ರೆಸ್ ಅಭಿನಂದನೆ

7

ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿಗೆ ಸೋನಿಯಾ, ಕಾಂಗ್ರೆಸ್ ಅಭಿನಂದನೆ

Published:
Updated:

ನವದೆಹಲಿ: ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಯುಪಿಎ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್ ಸಂಸದರು ಲೋಕಸಭೆಯಲ್ಲಿ ಅಭಿನಂದಿಸಿದ್ದಾರೆ.

ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ದೇಶದ ಸಾರಿಗೆ ಕ್ಷೇತ್ರದಲ್ಲಿ ಮಾಡಿರುವ ಸಾಧನೆಯನ್ನು ಪ್ರಶಂಸಿಸಿ ಕಾಂಗ್ರೆಸ್ ಸಂಸದರು ಈ ಅಭಿನಂದನೆ ಸಲ್ಲಿಸಿದ್ದಾರೆ.

ತಮ್ಮ ಸಚಿವಾಲಯದ ಬಗ್ಗೆ ಕೇಳಲಾಗಿದ್ದ ಪ್ರಶ್ನೆಗಳಿಗೆ ಗಡ್ಕರಿ ಅವರು ಲೋಕಸಭೆಯ ಗುರುವಾರದ ಕಲಾಪದ ಶೂನ್ಯವೇಳೆಯಲ್ಲಿ ಉತ್ತರ ನೀಡಿದರು. ತಮ್ಮ ಅವಧಿಯಲ್ಲಿ ಸಾರಿಗೆ ಸಚಿವಾಲಯದ ಯೋಜನೆಗಳು ಮತ್ತು ಅವುಗಳ ಪ್ರಗತಿಯ ಬಗೆಗಿನ ಮಾಹಿತಿಯನ್ನು ಅವರು ಸದನದ ಮುಂದಿರಿಸಿದರು.

‘ದೇಶದ ಎಲ್ಲಾ ಲೋಕಸಭಾ ಕ್ಷೇತ್ರಗಳಲ್ಲಿ ನಮ್ಮ ಸಚಿವಾಲಯವು ಕೈಗೊಂಡಿರುವ ಕೆಲಸಗಳ ಬಗ್ಗೆ ಇಲ್ಲಿರುವ ಎಲ್ಲಾ ಸಂಸದರು ಪಕ್ಷಾತೀತವಾಗಿ ನನಗೆ ಅಭಿನಂದನೆ ಸಲ್ಲಿಸುತ್ತಾರೆ ಎಂಬುದನ್ನು ಹೇಳಲು ಬಯಸುತ್ತೇನೆ’ ಎಂದು ಗಡ್ಕರಿ ಹೇಳಿದರು.

ತಕ್ಷಣವೇ ಬಿಜೆಪಿ ಸಂಸದರು ಮೇಜುಕುಟ್ಟಿ ಅಭಿನಂದನೆ ಸಲ್ಲಿಸಿದರು. ಇದರ ಬೆನ್ನಲ್ಲೇ ಸೋನಿಯಾ ಗಾಂಧಿ ಸಹ ಮೇಜುಕುಟ್ಟಿ ಅಭಿನಂದನೆ ಸಲ್ಲಿಸಿದರು. ಸೋನಿಯಾ ಅವರನ್ನು ಅವರ ಪಕ್ಷದ ಎಲ್ಲಾ ಸಂಸದರು ಅನುಸರಿಸಿದರು.

ಬರಹ ಇಷ್ಟವಾಯಿತೆ?

 • 47

  Happy
 • 5

  Amused
 • 0

  Sad
 • 1

  Frustrated
 • 0

  Angry

Comments:

0 comments

Write the first review for this !