ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ನರೇಗಾ: ಮುಂಗಡ ವೇತನ ಪಾವತಿಗೆ ಸೋನಿಯಾ ಮನವಿ

Last Updated 1 ಏಪ್ರಿಲ್ 2020, 21:12 IST
ಅಕ್ಷರ ಗಾತ್ರ

ನವದೆಹಲಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಕೆಲಸ ಮಾಡುವ ಕಾರ್ಮಿಕರಿಗೆ ಇಪ್ಪತ್ತೊಂದು ದಿನಗಳ ವೇತನವನ್ನು ಮುಂಗಡವಾಗಿ ಪಾವತಿವಂತೆ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಒತ್ತಾಯಿಸಿದ್ದಾರೆ.

ಈ ಕುರಿತು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಅವರು, ‘ಲಾಕ್‌ಡೌನ್ ನಿಂದಾಗಿ ಗ್ರಾಮೀಣ ಭಾಗದ ಬಡ ಜನರು ಕೆಲಸವಿಲ್ಲದೆ ಸಂಕಷ್ಟ ಅನುಭವಿಸುತ್ತಿದ್ದಾರೆ. ಅವರಿಗೆ ಆರ್ಥಿಕ ಬಲ ನೀಡಲು ಮುಂಗಡವಾಗಿ ವೇತನ ಪಾವತಿಸಬೇಕು’ ಎಂದು ಮನವಿ ಮಾಡಿದ್ದಾರೆ.

‘ಎಂಟು ಕೋಟಿ ನರೇಗಾ ಕಾರ್ಮಿಕರು ಸಂಕಷ್ಟದಲ್ಲಿದ್ದು, ಅವರು ಪರ್ಯಾಯ ಆದಾಯ ಮೂಲವನ್ನು ಹೊಂದಿಲ್ಲ. ಕಾರ್ಮಿಕರ ಸಮಸ್ಯೆ ಪರಿಹಾರಕ್ಕೆ ತಕ್ಷಣ ಕ್ರಮ ತೆಗೆದುಕೊಳ್ಳಬೇಕು’ ಎಂದು ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT