ಗುರುವಾರ , ಜನವರಿ 23, 2020
28 °C

ಕೇಂದ್ರ ಸರ್ಕಾರವು ಧರ್ಮದ ಆಧಾರದಲ್ಲಿ ಜನರನ್ನು ವಿಭಜಿಸುತ್ತಿದೆ: ಸೋನಿಯಾ ಗಾಂಧಿ

ಏಜೆನ್ಸಿಸ್ Updated:

ಅಕ್ಷರ ಗಾತ್ರ : | |

ನವದೆಹಲಿ: ಕೇಂದ್ರ ಸರ್ಕಾರವು ಜಾತಿ–ಧರ್ಮಗಳ ಆಧಾರದಲ್ಲಿ ಜನರನ್ನು ವಿಭಜಿಸಲು ಹೊರಟಿದೆ ಎಂದು ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ನವದೆಹಲಿಯಲ್ಲಿ ನಡೆದ ವಿರೋಧ ಪಕ್ಷಗಳ ಸಭೆಯಲ್ಲಿ ಮಾತನಾಡಿರುವ ಅವರು, ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದಬ್ಬಾಳಿಕೆಯ ಆಳ್ವಿಕೆ ನಡೆಸುತ್ತಿದೆ. ಜನರ ನಡುವೆ ಜಾತಿ–ಧರ್ಮಗಳ ಆಧಾರದಲ್ಲಿ ಗೆರೆ ಎಳೆದು ದ್ವೇಷ ಬಿತ್ತುವ ಕೆಲಸ ಮಾಡುತ್ತಿದೆ’ ಎಂದು ಕಿಡಿ ಕಾರಿದ್ದಾರೆ. 

ಸಿಎಎ ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ತೆಗೆದುಕೊಂಡ ಕ್ರಮವನ್ನು ಖಂಡಿಸಿರುವ ಸೋನಿಯಾ ಗಾಂಧಿ, ‘ಸಿಎಎ–ಎನ್‌ಆರ್‌ಸಿ ವಿರೋಧಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ. ಅವರಿಗೆ ನಾಗರಿಕರು ಬೆಂಬಲ ವ್ಯಕ್ತಪಡಿಸುತ್ತಿದ್ದಾರೆ. ಉತ್ತರ ಪ್ರದೇಶ ಹಾಗೂ ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಜೊತೆ ಪೊಲೀಸರು ನಡೆದುಕೊಂಡಿರುವ ರೀತಿ ಪಕ್ಷಪಾತ ಮತ್ತು ಕ್ರೂರತನದಿಂದ ಕೂಡಿದೆ’ ಎಂದು ಹೇಳಿದ್ದಾರೆ. 

ಇದೇ ವೇಳೆ ಪ್ರಧಾನಿ ಮೋದಿ ಮತ್ತು ಅಮಿತ್‌ ಶಾ ವಿರುದ್ಧ ವಾಗ್ದಾಳಿ ನಡೆಸಿರುವ ಅವರು, ‘ಮೋದಿ ಮತ್ತು ಅಮಿತ್‌ ಶಾ ಅವರು ದೇಶದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಅವರು ಪ್ರಚೋದನಕಾರಿ ಹೇಳಿಕೆಗಳನ್ನು ನೀಡುವಲ್ಲಿ ನಿರತರಾಗಿದ್ದಾರೆ. ದೇಶದಲ್ಲಿ ನಡೆಯುತ್ತಿರುವ ಹಿಂಸಾಚಾರದ ಬಗ್ಗೆ ಅವರಿಬ್ಬರೂ ನಡೆದುಕೊಳ್ಳತ್ತಿರುವ ರೀತಿ ಅಸೂಕ್ಷ್ಮವಾಗಿದೆ’ ಎಂದು ತಿಳಿಸಿದ್ದಾರೆ. 

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು