ಭಾನುವಾರ, ಸೆಪ್ಟೆಂಬರ್ 20, 2020
23 °C

ಕಾಂಗ್ರೆಸ್‌ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾ ಗಾಂಧಿ ಪುನರಾಯ್ಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕಿಯಾಗಿ ಸೋನಿಯಾಗಾಂಧಿ ಶನಿವಾರ ಪುನರಾಯ್ಕೆಯಾಗಿದ್ದಾರೆ. ಸಂಸತ್ತಿನ ಸೆಂಟ್ರಲ್‌ ಹಾಲ್‌ನಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಯ್ಕೆಯಾಗಿರುವ ಸಂಸತ್ ಸದಸ್ಯರ ಸಭೆಯಲ್ಲಿ ಸೋನಿಯಾ ಆಯ್ಕೆಯನ್ನು ಪ್ರಕಟಿಸಲಾಯಿತು.

ಪಕ್ಷದಿಂದ ಲೋಕಸಭೆಗೆ ಆಯ್ಕೆಯಾಗಿರುವ ಎಲ್ಲ 52 ಸದಸ್ಯರು ಮತ್ತು ರಾಜ್ಯಸಭೆ ಸದಸ್ಯರು ಸಭೆಯಲ್ಲಿ ಪಾಲ್ಗೊಂಡಿದ್ದರು. ಉತ್ತರ ಪ್ರದೇಶದ ರಾಯ್‌ಬರೇಲಿ ಕ್ಷೇತ್ರದಿಂದ ಲೋಕಸಭೆಗೆ ಆಯ್ಕೆಯಾಗಿರುವ ಸೋನಿಯಾ ಗಾಂಧಿ ಯುಪಿಎ ಮೈತ್ರಿಕೂಟದ ಮುಖ್ಯಸ್ಥರೂ ಹೌದು.

ಸಂಸದೀಯ ಪಕ್ಷದ ನಾಯಕರಾಗಿ ಸೋನಿಯಾ ಗಾಂಧಿ ಆಯ್ಕೆ ಘೋಷಣೆಯನ್ನು ಟ್ವಿಟರ್ ಮೂಲಕ ಘೋಷಿಸಿದ ಕಾಂಗ್ರೆಸ್‌ ಪಕ್ಷದ ಮುಖ್ಯ ವಕ್ತಾರ ರಣದೀಪ್ ಸುರ್ಜೆವಾಲಾ, ‘ಕಾಂಗ್ರೆಸ್‌ಗೆ ಮತ ನೀಡಿದ ದೇಶದ 12.13 ಕೋಟಿ ಮತದಾರರಿಗೆ ಧನ್ಯವಾದಗಳು’ ಎನ್ನುವ ಸೋನಿಯಾ ಗಾಂಧಿ ಭಾಷಣವನ್ನು ಉಲ್ಲೇಖಿಸಿದ್ದಾರೆ.

ಲೋಕಸಭೆ ಅಧಿವೇಶನದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಪದ್ಧತಿಯನ್ನು ನಿರೂಪಿಸಲು ಸಂಸದೀಯ ನಾಯಕನನ್ನು ಆರಿಸಬೇಕಿದೆ. ಮೇ 25ರ ನಂತರ ಪಕ್ಷದ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಭಾಗವಹಿಸಿದ ಪಕ್ಷದ ಮೊದಲ ಅಧಿಕೃತ ಕಾರ್ಯಕಾರಿ ಸಮೀತಿ ಸಭೆ ಇದು.

ಮೇ 25ರಂದು ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷಸ್ಥಾನ ತೊರೆಯುವ ನಿರ್ಧಾರ ಪ್ರಕಟಿಸಿದ್ದರು. ಕಾಂಗ್ರೆಸ್ ಕಾರ್ಯಕಾರಿ ಸಮಿತಿಯು ಈ ಪ್ರಸ್ತಾವ ತಿರಸ್ಕರಿಸಿತ್ತು. ಮಾತ್ರವಲ್ಲದೆ ಪಕ್ಷದ ಸಂಘಟನೆಯಲ್ಲಿ ಅಗತ್ಯ ಬದಲಾವಣೆ ಮಾಡಲು ರಾಹುಲ್ ಅವರಿಗೆ ಅಧಿಕಾರ ನೀಡಲು ಸರ್ವಾನುಮತದ ನಿರ್ಣಯ ಅಂಗೀಕರಿಸಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು