ಭಾನುವಾರ, ಮಾರ್ಚ್ 29, 2020
19 °C

ರಾಜಧರ್ಮದ ಬಗ್ಗೆ ಪಾಠ ಮಾಡಬೇಡಿ: ಸೋನಿಯಾ ವಿರುದ್ದ ಗುಡುಗಿದ ರವಿಶಂಕರ್‌ ಪ್ರಸಾದ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಅವರು ಕೇಂದ್ರ ಸರ್ಕಾರಕ್ಕೆ ರಾಜಧರ್ಮದ ಬಗ್ಗೆ ಪಾಠ ಮಾಡುವ ಅವಶ್ಯಕತೆ ಇಲ್ಲ ಎಂದು ಕೇಂದ್ರ ಕಾನೂನು ಸಚಿವ ರವಿಶಂಕರ್‌ ಪ್ರಸಾದ್‌ ಹೇಳಿದ್ದಾರೆ. 

ದೆಹಲಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಗುರುವಾರ ಹರಿಹಾಯ್ದಿದ್ದ ಸೋನಿಯಾ ಗಾಂಧಿ, ‘ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ರಾಜಧರ್ಮ ಪಾಲಿಸಬೇಕು. ಗೃಹ ಸಚಿವ ಅಮಿತ್‌ ಶಾ ತಕ್ಷಣವೇ ರಾಜೀನಾಮೆ ನೀಡಬೇಕು' ಎಂದು ಒತ್ತಾಯಿಸಿದ್ದರು. 

ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ರವಿಶಂಕರ ಪ್ರಸಾದ್‌, ‘ಶ್ರೀಮತಿ ಸೋನಿಯಾ ಗಾಂಧಿ ಅವರೇ, ನೀವು ನಮಗೆ ರಾಜಧರ್ಮದ ಬಗ್ಗೆ ಉಪದೇಶ ನೀಡಲು ಬರಬೇಡಿ’ ಎಂದಿದ್ದಾರೆ. 

ಇದೇ ವೇಳೆ ಬಿಜೆಪಿ ಮುಖಂಡ ಕಪಿಲ್‌ ಮಿಶ್ರಾ ಅವರ ದ್ವೇಷಪೂರಿತ ಭಾಷಣದ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಕಪಿಲ್‌ ಮಿಶ್ರಾ ಆಡಿದ ಮಾತುಗಳನ್ನು ನಮ್ಮ ಪಕ್ಷ ಎಂದಿಗೂ ಮನ್ನಿಸುವುದಿಲ್ಲ. ಮಿಶ್ರಾ ಮಾತುಗಳನ್ನು ನಮ್ಮ ಪಕ್ಷದ ಹಿರಿಯ ನಾಯಕರೇ ಸಾರ್ವಜನಿಕವಾಗಿ ಖಂಡಿಸಿದ್ದಾರೆ‘ ಎಂದು ತಿಳಿಸಿದ್ದಾರೆ. 
 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು