ಬುಧವಾರ, ಫೆಬ್ರವರಿ 19, 2020
19 °C
ಐಎನ್ಎಕ್ಸ್ ಮೀಡಿಯಾ ಹಗರಣ

ತಿಹಾರ್‌ ಜೈಲಿನಲ್ಲಿ ಚಿದಂಬರಂ ಭೇಟಿಯಾದ ಸೋನಿಯಾ, ಮನಮೋಹನ್‌ ಸಿಂಗ್‌

ಏಜೆನ್ಸಿಸ್‌ Updated:

ಅಕ್ಷರ ಗಾತ್ರ : | |

ನವದೆಹಲಿ: ಐಎನ್ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನಕ್ಕೆ ಒಳಗಾಗಿರುವ ಕಾಂಗ್ರೆಸ್‌ ಮುಖಂಡ ಪಿ.ಚಿದಂಬರಂ(74) ಅವರನ್ನು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್ ಮತ್ತು ಕಾಂಗ್ರಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಸೋಮವಾರ ಭೇಟಿಯಾದರು.

ಸೆಪ್ಟೆಂಬರ್‌ 5ರಿಂದ ತಿಹಾರ್ ಕೇಂದ್ರ ಕಾರಾಗೃಹದಲ್ಲಿರುವ ಚಿದಂಬರಂ ಅವರನ್ನು ಸೋನಿಯಾ ಗಾಂಧಿ, ಮನಮೋಹನ್‌ ಸಿಂಗ್‌ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. 

ಇದನ್ನೂ ಓದಿ: ಚಿದಂಬರಂ, ಕಾರ್ತಿ ಹಾಗೂ ಐಎನ್‌ಎಕ್ಸ್: ಏನಿದು ಹಗರಣ?

ಮಾಜಿ ಹಣಕಾಸು ಸಚಿವ ಚಿದಂಬರಂ ಪುತ್ರ, ಸಂಸದ ಕಾರ್ತಿ ಚಿದಂಬರಂ ಸಹ ಕಾಂಗ್ರೆಸ್‌ ನಾಯಕರೊಂದಿಗೆ ತಿಹಾರ್‌ ಜೈಲಿಗೆ ಭೇಟಿ ನೀಡಿದ್ದರು. 

ಕಳೆದ ವಾರ ಕಾಂಗ್ರೆಸ್‌ ಮುಖಂಡರಾದ ಗುಲಾಮ್‌ ನಬಿ ಆಜಾದ್‌ ಮತ್ತು ಅಹಮದ್‌ ಪಟೇಲ್‌ ತಿಹಾರ್‌ ಜೈಲಿನಲ್ಲಿ ಚಿದಂಬರಂ ಅವರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದ್ದರು. 

ಇದನ್ನೂ ಓದಿ: ಚಿದಂಬರಂ ಸೆರೆಗೆ ಇಂದ್ರಾಣಿ ಮುಖರ್ಜಿ ಹೇಳಿಕೆಯೇ ಆಧಾರ

ಚಿದಂಬರಂ ಅವರ ಟ್ವಿಟರ್‌ ಖಾತೆಯು ಕಾರ್ಯಾಚರಿಸುತ್ತಿದ್ದು, ಪ್ರಸಕ್ತ ರಾಜಕೀಯ ಬೆಳವಣಿಗೆಗಳ ಬಗ್ಗೆ ಅಭಿಪ್ರಾಯಗಳು ಪ್ರಕಟಗೊಳ್ಳುತ್ತಿವೆ. ‘ಕಾಂಗ್ರೆಸ್‌ ಪಕ್ಷ ಎಲ್ಲಿಯವರೆಗೂ ಪ್ರಬಲ ಮತ್ತು ಧೈರ್ಯವಾಗಿರುವುದೋ ಆ ವರೆಗೂ ನಾನೂ ಸಹ ಧೈರ್ಯದಿಂದಿರುವೆ‘ ಎಂದು ಟ್ವೀಟಿಸಿದ್ದಾರೆ. 

ಇದನ್ನೂ ಓದಿ: ಐಎನ್‌ಎಕ್ಸ್‌ ಮೀಡಿಯಾ ಹಗರಣ: ಚಿದಂಬರಂ ಶರಣಾಗತಿ ಅರ್ಜಿ ತಿರಸ್ಕರಿಸಿದ ಕೋರ್ಟ್‌

ನನ್ನ ತಂದೆ ಮತ್ತು ನನ್ನ ಕುಟುಂಬ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಮಾಜಿ ಪ್ರಧಾನಿ  ಮನಮೋಹನ್‌ ಸಿಂಗ್‌ ಅವರಿಗೆ ಆಭಾರಿಯಾಗಿದೆ ಎಂದು ಕಾರ್ತಿ ಚಿದಂಬರಂ ಪ್ರತಿಕ್ರಿಯಿಸಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು