ಶನಿವಾರ, ಮೇ 30, 2020
27 °C

‘ಆಗ್ನೇಯ ಏಷ್ಯಾ ರಾಷ್ಟ್ರಗಳು ನರ್ಸ್‌ಗಳ ಸಂಖ್ಯೆಯನ್ನು ಬಲಪಡಿಸಬೇಕು’

ಪಿಟಿಐ Updated:

ಅಕ್ಷರ ಗಾತ್ರ : | |

prajavani

ನವದೆಹಲಿ: ಕೋವಿಡ್‌–19 ವಿರುದ್ಧದ ಹೋರಾಟದಲ್ಲಿ ಮುಂಚೂಣಿಯಲ್ಲಿರುವ ವೈದ್ಯಕೀಯ ಸಿಬ್ಬಂದಿಯನ್ನು ವಿಶ್ವ ಆರೋಗ್ಯ ಸಂಸ್ಥೆ ಶ್ಲಾಘಿಸಿದ್ದು, 2030ರೊಳಗೆ ಎಲ್ಲರಿಗೂ ಆರೋಗ್ಯ ಧ್ಯೇಯ ಸಾಧಿಸಬೇಕಾದರೆ ಆಗ್ನೇಯ ಏಷ್ಯಾ ರಾಷ್ಟ್ರಗಳು ನರ್ಸ್‌ಗಳ ಸಂಖ್ಯೆಯನ್ನು 19 ಲಕ್ಷ ಹೆಚ್ಚಿಸಿಕೊಳ್ಳಬೇಕು ಎಂದು ಸೂಚಿಸಿದೆ. 

ವಿಶ್ವ ಆರೋಗ್ಯ ದಿನದ ಹಿನ್ನೆಲೆಯಲ್ಲಿ ಮಾತನಾಡಿದ ಆಗ್ನೇಯ ಏಷ್ಯಾದ ಪ್ರಾದೇಶಿಕ ನಿರ್ದೇಶಕಿ ಡಾ.ಪೂನಂ ಖೇತ್ರಪಾಲ್‌ ಸಿಂಗ್‌, ‘ಎಲ್ಲರಿಗೂ ಗುಣಮಟ್ಟದ ಆರೋಗ್ಯ ಸೇವೆ ನೀಡಲು ನರ್ಸ್‌ಗಳ ಸೇವೆ ಅಗತ್ಯವಾಗಿದೆ. ಬಾಣಂತಿಯರು, ನವಜಾತ ಶಿಶುಗಳ ಆರೈಕೆ, ಹಿರಿಯರಿಗೆ ಆರೋಗ್ಯ ಸಲಹೆ, ಸಮಯಕ್ಕೆ ಸರಿಯಾಗಿ ಔಷಧಿಗಳನ್ನು ನೀಡುವ ಇವರು ಆರೋಗ್ಯ ಸೇವೆಯ ಕೇಂದ್ರಬಿಂದು. ಈ ಹಿನ್ನೆಲೆಯಲ್ಲಿ ನರ್ಸ್‌ಗಳ ಸಂಖ್ಯೆಯನ್ನು ಹೆಚ್ಚಿಸಲು ಹಾಗೂ ಅವರ ಕೌಶಲ್ಯಾಭಿವೃದ್ಧಿಗೆ ನಾವು ದುಪ್ಪಟ್ಟು ಪ್ರಯತ್ನ ಪಡಬೇಕು’ ಎಂದರು. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು