ಶುಕ್ರವಾರ, ಏಪ್ರಿಲ್ 23, 2021
32 °C

ಭಯೋತ್ಪಾದಕ ಎಂಬಂತೆ ವರ್ತನೆ: ಆಜಂ ಖಾನ್‌ ಆರೋಪ

ಪಿಟಿಐ Updated:

ಅಕ್ಷರ ಗಾತ್ರ : | |

ಸೀತಾಪುರ: ‘ಸೀತಾಪುರ ಜೈಲಿನಲ್ಲಿ ಭಯೋತ್ಪಾದಕ ಎಂಬಂತೆ ತಮ್ಮೊಂದಿಗೆ ವರ್ತಿಸಲಾಗಿದೆ’ ಎಂದು ಸಮಾಜವಾದಿ ಪಕ್ಷದ ಸಂಸದ ಆಜಂ ಖಾನ್‌ ಶನಿವಾರ ಆರೋಪಿಸಿದ್ದಾರೆ.

ಸೀತಾಪುರ ಜೈಲಿನಿಂದ ರಾಂಪುರ ನ್ಯಾಯಾಲಯಕ್ಕೆ ಕರೆತಂದ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ಜೈಲಿನಲ್ಲಿ ತಮ್ಮೊಂದಿಗೆ ಅಮಾನವೀಯವಾಗಿ ವರ್ತಿಸಲಾಗಿದೆ’ ಎಂದಿದ್ದಾರೆ.

ನಕಲಿ ಪ್ರಮಾಣಪತ್ರ ಪ್ರಕರಣಕ್ಕೆ ಸಂಬಂಧಿಸಿದಂತೆ ಅವರನ್ನು ಈಚೆಗೆ ಪೊಲೀಸರು ಬಂಧಿಸಿದ್ದರು.

ಇನ್ನೊಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಖಾನ್‌ ಅವರ ಹೆಂಡತಿ ತನ್‌ಜೀನ್‌ ಫಾತಿಮಾ ಮತ್ತು ಮಗ ಅಬ್ದುಲ್ಲಾ ಆಜಂ ಅವರನ್ನೂ ಬಿಗಿ ಭದ್ರತೆಯ ನಡುವೆ ರಾಂಪುರ ನ್ಯಾಯಾಲಯಕ್ಕೆ ಕರೆತರಲಾಗಿತ್ತು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು