ಬುಧವಾರ, ಸೆಪ್ಟೆಂಬರ್ 22, 2021
29 °C

ಎಸ್‌.ಪಿ ಮುಖಂಡ ಅಪಹರಣ, ಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬಿಜಾಪುರ, ಛತ್ತೀಸ್‌ಗಡ: ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು, ಸಮಾಜವಾದಿ ಪಕ್ಷದ ಮುಖಂಡ ಸಂತೋಷ್ ಪೂನೆಂ ಅವರನ್ನು ಅಪಹರಿಸಿ, ಹತ್ಯೆ ಮಾಡಿದ್ದಾರೆ.

ಗುತ್ತಿಗೆದಾರರೂ ಆಗಿದ್ದ ಸಂತೋಷ್ ಮಂಗಳವಾರ ಸಂಜೆ ಮಾರಿಮಲ್ಲ ಹಳ್ಳಿಯ ರಸ್ತೆ ಕಾಮಗಾರಿ ಮೇಲ್ವಿಚಾರಣೆಗೆ ತೆರಳಿದ್ದರು. ಆ ಸ್ಥಳದಿಂದಲೇ ಅವರನ್ನು ಅಪಹರಿಸಿದ ನಕ್ಸಲರು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ದಿವ್ಯಾಂಗ್ ಪಟೇಲ್ ತಿಳಿಸಿದ್ದಾರೆ.

ಬುಧವಾರ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸಂತೋಷ್ ಅವರ ಮೃತ ದೇಹ ಗಮನಿಸಿದ ಸ್ಥಳೀಯರು, ಪೊಲೀಸರಿಗೆ ತಿಳಿಸಿದ್ದರು. ಪೊಲೀಸ್ ಠಾಣೆಯಿಂದ16 ಕಿ.ಮೀ. ದೂರದ ದಟ್ಟ ಕಾಡಿನೊಳಗೆ ಭದ್ರತಾ ಸಿಬ್ಬಂದಿ ತೆರಳಿದ್ದು, ತನಿಖೆ ಕೈಗೊಳ್ಳಲಾಗಿದೆ. ಕಳೆದ ವರ್ಷ ಸಂತೋಷ್‌ ಬಿಜಾಪುರ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಸಮಾಜವಾದಿ ಪಕ್ಷದಿಂದ ಸ್ಪರ್ಧಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು