ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಪ್ರದರ್ಶನ: ಗೆಹ್ಲೋಟ್‌ ಸ್ಥಾನಕ್ಕೆ ಕುತ್ತು?

Last Updated 27 ಮೇ 2019, 20:02 IST
ಅಕ್ಷರ ಗಾತ್ರ

ಜೈಪುರ: ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ ಹೀನಾಯ ಪ್ರದರ್ಶನದ ಬಳಿಕ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್‌ ಗೆಹ್ಲೋಟ್‌ ಅವರ ಸ್ಥಾನಕ್ಕೆ ಕುತ್ತುಬರುವ ಲಕ್ಷಣ ಕಾಣಿಸಿದೆ. ಶೀಘ್ರದಲ್ಲೇ ರಾಜ್ಯದ ಮುಖ್ಯಮಂತ್ರಿ ಬದಲಾಗಲಿದ್ದಾರೆ ಎಂಬ ವದಂತಿಗಳು ದಟ್ಟವಾಗಿವೆ.

ಚುನಾವಣಾ ಫಲಿತಾಂಶದ ಬಳಿಕ ದೆಹಲಿಯಲ್ಲಿ ನಡೆದಿದ್ದ ಕಾಂಗ್ರೆಸ್‌ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷದ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಗೆಹ್ಲೋಟ್‌ ಹಾಗೂ ಇತರ ಕೆಲವು ಮುಖಂಡರ ಕಾರ್ಯವೈಖರಿ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದರು. ಇದಾದ ಬಳಿಕ ಗೆಹ್ಲೋಟ್‌ ಅವರ ಅತ್ಯಂತ ಆಪ್ತರೆನಿಸಿರುವ ಲಾಲ್‌ಚಂದ್‌ ಕಟಾರಿಯಾ ಅವರು ಸೋಲಿನ ಹೊಣೆಹೊತ್ತು ತಮ್ಮ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ ಎಂದು ಹೇಳಲಾಗಿದೆ. ಈ ಬಗ್ಗೆ ಅಧಿಕೃತ ಮಾಹಿತಿ ಇನ್ನೂ ಲಭ್ಯವಾಗಿಲ್ಲ.

‘ಸದ್ಯದಲ್ಲೇ ಸ್ಥಳೀಯ ಸಂಸ್ಥೆಗಳ ಚುನಾವಣೆಗಳು ಬರಲಿವೆ. ಆ ಚುನಾವಣೆಗಳಲ್ಲಿ ಪಕ್ಷ ಉತ್ತಮ ಸಾಧನೆ ಮಾಡಬೇಕಾದರೆ ಲೋಕಸಭಾ ಚುನಾವಣೆಯಲ್ಲಿ ಆಗಿಸುವ ಸೋಲಿನ ಕಾರಣಗಳ ಬಗ್ಗೆ ವಿಮರ್ಶೆ ಮಾಡಲೇಬೇಕು’ ಎಂದು ಗೆಹ್ಲೋಟ್‌ ಸಂಪುಟದ ಇಬ್ಬರು ಸಚಿವರು ಹೇಳಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾಗಿದೆ.

ಕೆಲವೇ ತಿಂಗಳ ಹಿಂದೆ ನಡೆದ ವಿಧಾನಸಭಾ ಚುನಾವಣೆಯಲ್ಲಿ 100 ಸ್ಥಾನಗಳನ್ನು ಗೆದ್ದು ಅಧಿಕಾರ ಹಿಡಿದಿರುವ ಕಾಂಗ್ರೆಸ್‌ಗೆ ಲೋಕಸಭಾ ಚುನಾವಣೆಯಲ್ಲಿ ಒಂದು ಸ್ಥಾನವನ್ನು ಗೆಲ್ಲಲೂ ಸಾಧ್ಯವಾಗಲಿಲ್ಲ. ಇದು ಹೈಕಮಾಂಡ್‌ ಅಸಮಾಧಾನಕ್ಕೆ ಕಾರಣ ಎನ್ನಲಾಗಿದೆ.

ಮುಖ್ಯಮಂತ್ರಿ ಗೆಹ್ಲೋಟ್‌, ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ಹಾಗೂ ರಾಜ್ಯದಲ್ಲಿ ಕಾಂಗ್ರೆಸ್‌ ಉಸ್ತುವಾರಿ ವಹಿಸಿರುವ ಅವಿನಾಶ್‌ ಪಾಂಡೆ ಅವರು ಶೀಘ್ರದಲ್ಲೇ ರಾಹುಲ್‌ ಗಾಂಧಿ ಅವರನ್ನು ಭೇಟಿಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT