ಲತೀಫ್‌ ಟೈಗರ್‌ ಸೇರಿ ಮೂವರು ಉಗ್ರರ ಹತ್ಯೆ

ಸೋಮವಾರ, ಮೇ 20, 2019
28 °C

ಲತೀಫ್‌ ಟೈಗರ್‌ ಸೇರಿ ಮೂವರು ಉಗ್ರರ ಹತ್ಯೆ

Published:
Updated:

ಶ್ರೀನಗರ: ಭದ್ರತಾ ಪಡೆಗಳ ಜತೆ ಶುಕ್ರವಾರ ನಡೆದ ಎನ್‌ಕೌಂಟರ್‌ನಲ್ಲಿ ಉಗ್ರ ಬುರ್ಹಾನ್‌ ವಾನಿ ಸಹಚರರಾದ  ಲತೀಫ್‌ ದಾರ್‌ ಅಲಿಯಾಸ್‌ ಲತೀಫ್‌ ಟೈಗರ್‌ ಸೇರಿದಂತೆ ಮೂವರು ಉಗ್ರರು ಹತ್ಯೆಗೀಡಾಗಿದ್ದಾರೆ.

ದಕ್ಷಿಣ ಕಾಶ್ಮೀರದ ಶೋಪಿಯಾನ್‌ ಜಿಲ್ಲೆಯ ಅಡ್ಕರಾ ಗ್ರಾಮದಲ್ಲಿ ಈ ಎನ್‌ಕೌಂಟರ್ ನಡೆದಿದೆ. ಸೇನೆ ಹಾಗೂ ಜಮ್ಮು ಮತ್ತು ಕಾಶ್ಮೀರ ಪೊಲೀಸ್‌ ವಿಶೇಷ ಪಡೆ ಕಾರ್ಯಾಚರಣೆ ಕೈಗೊಂಡಿತ್ತು.

ಉಳಿದ ಇಬ್ಬರು ಉಗ್ರರನ್ನು ತಾರೀಕ್‌ ಮೌಲ್ವಿ ಮತ್ತು ಶಾರಿಕ್‌ ನೆಗ್ರೂ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಹಿಜ್ಬುಲ್‌ ಮುಜಾಹಿದ್ದೀನ್‌ ಸಂಘಟನೆ ಜತೆ ಗುರುತಿಸಿಕೊಂಡಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

2016ರ ಜುಲೈನಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ವಾನಿ ಹತ್ಯೆಗೀಡಾಗಿದ್ದ. ವಾನಿ ಜತೆಗಿದ್ದ ಲತೀಫ್‌ ಟೈಗರ್‌ 2014ರಿಂದ ಉಗ್ರಗಾಮಿ ಚಟುವಟಿಕೆಗಳಲ್ಲಿ ತೊಡಗಿದ್ದ.

2018ರಲ್ಲಿ 272 ಉಗ್ರರು ಎನ್‌ಕೌಂಟರ್‌ನಲ್ಲಿ ಹತ್ಯೆಯಾಗಿದ್ದರು. ಈ ವರ್ಷ ಇದುವರೆಗೆ 74 ಉಗ್ರರು ಹತ್ಯೆಗೀಡಾಗಿದ್ದಾರೆ. ಪುಲ್ವಾಮಾ ದಾಳಿ ಬಳಿಕ 42 ಉಗ್ರರು ಸಾವಿಗೀಡಾಗಿದ್ದಾರೆ.

ಇರ್ತಾರಾ ಮೋದಿ? ಬರ್ತಾರಾ ರಾಹುಲ್?

ಲೋಕಸಭೆ ಫಲಿತಾಂಶಕ್ಕಾಗಿ ವಿಶ್ವವೇ ಬೆರಗುಗಣ್ಣಿನಿಂದ ಕಾಯುತ್ತಿದೆ. ನರೇಂದ್ರ ಮೋದಿ ಗೆಲ್ತಾರಾ? ರಾಹುಲ್‌ ಗಾಂಧಿ ಬರ್ತಾರಾ? ರಾಜಕಾರಣದ ಕ್ಷಣಕ್ಷಣದ ಮಾಹಿತಿ, ತಾಜಾ ಅಪ್‌ಡೇಟ್‌ಗಳಿಗಾಗಿ www.prajavani.net/prajamatha ನೋಡಿ.

ಫೇಸ್‌ಬುಕ್‌ನಲ್ಲಿ ನಮ್ಮನ್ನು ಲೈಕ್ ಮಾಡಿ ಅಥವಾ ಟ್ವಿಟರ್, ಯೂಟ್ಯೂಬ್, ಇನ್‌ಸ್ಟಾಗ್ರಾಂನಲ್ಲಿ ಫಾಲೊ ಮಾಡಿ.

ತ್ವರಿತ ಸುದ್ದಿ, ನಿಖರ ವಿಶ್ಲೇಷಣೆಗೆ www.prajavani.net ಓದಿ. 'ಪ್ರಜಾವಾಣಿ' ಅತ್ಯಂತ ವಿಶ್ವಾಸಾರ್ಹ ಸುದ್ದಿ ಮಾಧ್ಯಮ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !