ಗುರುವಾರ, 9 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧಾರ್ಮಿಕ ಕೇಂದ್ರ, ಪ್ರವಾಸಿ ತಾಣಗಳಲ್ಲಿ ಮುಂಜ್ರಾಗತಾ ಕ್ರಮಕ್ಕೆ ಸೂಚನೆ

Last Updated 18 ಮಾರ್ಚ್ 2020, 12:39 IST
ಅಕ್ಷರ ಗಾತ್ರ

ಶ್ರೀನಗರ: ಎರಡು ಕೇಂದ್ರಾಡಳಿತ ಪ್ರದೇಶದ ವ್ಯಾಪ್ತಿಯಲ್ಲಿನ ಧಾರ್ಮಿಕ ಕೇಂದ್ರ ಹಾಗೂ ಪ್ರವಾಸಿ ತಾಣಗಳಲ್ಲಿ ಕೊರೊನಾ ಸೋಂಕು ತಡೆಗೆ ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಳ್ಳಬೇಕು ಎಂದು ಜಮ್ಮು ಮತ್ತು ಕಾಶ್ಮೀರದ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಸಾರ್ವಜನಿಕ ಹಿತಾಸಕ್ತಿ ಅರ್ಜಿಯೊಂದರ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಗೀತಾ ಮಿತ್ತಲ್‌ ಹಾಗೂ ನ್ಯಾಯಮೂರ್ತಿ ರಾಜೇಶ್‌ ಬಿಂದಾಲ್‌ ನೇತೃತ್ವದ ಪೀಠ ಎರಡು ದಿನಗಳ ಒಳಗೆ ಸಾರ್ವಜನಿಕರ ಆರೋಗ್ಯದ ಕಾಳಜಿ ಕುರಿತು ಅಗತ್ಯ ಕ್ರಮ ತೆಗೆದುಕೊಳ್ಳುವಂತೆ ಸೂಚಿಸಿದೆ.

ಜಮ್ಮು ಮತ್ತು ಕಾಶ್ಮೀರ ಹಾಗೂ ಲಡಾಕ್‌ನಲ್ಲಿ ಪ್ರಮುಖ ಧಾರ್ಮಿಕ ಕೇಂದ್ರ ಹಾಗೂ ಪ್ರಸಿದ್ಧ ಪ್ರವಾಸಿ ತಾಣಗಳಿದ್ದು, ಇಲ್ಲಿ ದೇಶ ಹಾಗೂ ವಿದೇಶಗಳಿಂದ ಹೆಚ್ಚಿನ ಸಂಖ್ಯೆಯ ಯಾತ್ರಿಕರು ಬರುತ್ತಾರೆ ಹಾಗಾಗಿ ಅಗತ್ಯ ಕ್ರಮ ಕೈಗೊಳ್ಳುವಂತೆ ಎರಡೂ ಕೇಂದ್ರಾಡಳಿತ ಪ್ರದೇಶದ ಎಲ್ಲ ಜಿಲ್ಲಾಧಿಕಾರಿಗಳಿಗೆ ಸೂಚಿಸಿದೆ.

ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಕಾರ್ಯದರ್ಶಿಯು ಎರಡು ದಿನದ ಒಳಗೆ ಧಾರ್ಮಿಕ ಕೇಂದ್ರಗಳಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಈ ಕುರಿತ ನ್ಯಾಯಾಲಯದ ಆದೇಶವನ್ನು ಜಮ್ಮು ಮತ್ತು ಕಾಶ್ಮೀರದ ಮುಖ್ಯ ಕಾರ್ಯದರ್ಶಿ, ಲಡಾಕ್‌ನ ಮುಖ್ಯ ಕಾರ್ಯದರ್ಶಿ ಹಾಗೂ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಈಮೇಲ್‌ ಮೂಲಕ ಕಳುಹಿಸಬೇಕು ಎಂದು ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT