ಶನಿವಾರ, ಸೆಪ್ಟೆಂಬರ್ 21, 2019
24 °C

ಎಸ್‌ಎಸ್‌ಸಿ: 2017ರ ಫಲಿತಾಂಶ ಪ್ರಕಟಣೆಗೆ ‘ಸುಪ್ರೀಂ’ ಅನುಮತಿ

Published:
Updated:

ನವದೆಹಲಿ : ಸಿಬ್ಬಂದಿ ಆಯ್ಕೆ ಆಯೋಗವು (ಎಸ್‌ಎಸ್‌ಸಿ) 2017ರಲ್ಲಿ ನಡೆಸಿದ ‘ಕಂಬೈನ್ಡ್‌ ಗ್ರಾಜುಯೇಟ್‌ ಲೆವೆಲ್‌’ ಹಾಗೂ ‘ಹೈಯರ್ ಸೆಕಂಡರಿ ಲೆವೆಲ್’ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸಲು ಸುಪ್ರೀಂಕೋರ್ಟ್‌ ಗುರುವಾರ ಅನುಮತಿ ನೀಡಿದೆ.

ಈ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ತಾನೇ ನೀಡಿದ್ದ ತಡೆಯನ್ನು ಸುಪ್ರೀಂಕೋರ್ಟ್‌ ತೆರವುಗೊಳಿಸಿದ್ದು, ಫಲಿತಾಂಶಕ್ಕಾಗಿ ಕಾಯುತ್ತಿದ್ದ ಲಕ್ಷಾಂತರ ಅಭ್ಯರ್ಥಿಗಳು ನಿಟ್ಟುಸಿರುವ ಬಿಡುವಂತಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಹಾಗೂ ಸಾಕಷ್ಟು ಅಕ್ರಮ ನಡೆದಿದೆ ಎಂದು ಆರೋಪಿಸಿದ್ದ ಶಂತನು ಕುಮಾರ್‌ ಎಂಬುವವರು, ಫಲಿತಾಂಶ ಪ್ರಕಟಣೆಗೆ ತಡೆ ನೀಡುವಂತೆ ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಸುಪ್ರೀಂಕೋರ್ಟ್‌ ಕಳೆದ ವರ್ಷ ಆಗಸ್ಟ್‌ 31ರಂದು ಫಲಿತಾಂಶ ಪ್ರಕಟಣೆಗೆ ತಡೆ ನೀಡಿತ್ತು.

Post Comments (+)