ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಜಸ್ಥಾನ, ತೆಲಂಗಾಣ, ಮಧ್ಯಪ್ರದೇಶ ಚುನಾವಣೆ: ಪ್ರಚಾರಕ್ಕೆ ರಾಜ್ಯದ ನಾಯಕರು

ಎಐಸಿಸಿಯಿಂದ ನಿಯೋಜನೆ ಸಾಧ್ಯತೆ
Last Updated 15 ನವೆಂಬರ್ 2018, 17:52 IST
ಅಕ್ಷರ ಗಾತ್ರ

ನವದೆಹಲಿ: ರಾಜಸ್ಥಾನ, ತೆಲಂಗಾಣ ಮತ್ತು ಮಧ್ಯಪ್ರದೇಶ ವಿಧಾನಸಭೆ ಚುನಾವಣೆ ಪ್ರಚಾರಕ್ಕೆ ರಾಜ್ಯದ ಕಾಂಗ್ರೆಸ್‌ ಮುಖಂಡರನ್ನು ನಿಯೋಜಿಸುವ ಸಾಧ್ಯತೆ ಇದೆ ಎಂದು ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ ಹೇಳಿದರು.

ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ, ಲೋಕಸಭೆಯ ಕಾಂಗ್ರೆಸ್‌ ಗುಂಪಿನ ನಾಯಕ ಮಲ್ಲಿಕಾರ್ಜುನ ಖರ್ಗೆ, ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಪ್ರಚಾರಕ್ಕೆ ನಿಯೋಜಿಸುವ ಕುರಿತು ಗುರುವಾರ ಪಕ್ಷದ ವರಿಷ್ಠರೊಂದಿಗೆ ನಡೆದ ಸಭೆಯಲ್ಲಿ ಚರ್ಚಿಸಲಾಯಿತು ಎಂದು ಅವರು ಸುದ್ದಿಗಾರರಿಗೆ ತಿಳಿಸಿದರು.

ಹಿಂದುಳಿದ ಮತ್ತು ದಲಿತ ಸಮುದಾಯಗಳ ಮತ ಸೆಳೆಯುವ ನಿಟ್ಟಿನಲ್ಲಿ ಈ ಮೂವರೂ ನಾಯಕರನ್ನು ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಪಕ್ಷ ಆದೇಶ ಹೊರಡಿಸುವ ಸಾಧ್ಯತೆ ಇದೆ ಎಂದು ಅವರು ವಿವರಿಸಿದರು.

ದುರ್ಬಳಕೆ ಮಾಡಿಕೊಂಡಿಲ್ಲ: ‘ನನ್ನ ಬಂಧನದ ಹಿಂದೆ ರಾಜ್ಯ ಸರ್ಕಾರದ ಕೈವಾಡವಿದೆ. ಪೊಲೀಸ್ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳಲಾಗಿದೆ’ ಎಂಬ ಜನಾರ್ದನ ರೆಡ್ಡಿ ಅವರ ಆರೋಪದಲ್ಲಿ ಹುರುಳಿಲ್ಲ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT