ಗುರುವಾರ , ಫೆಬ್ರವರಿ 20, 2020
29 °C

ಕೇಂದ್ರ ಒತ್ತಡ ಹೇರುವಂತಿಲ್ಲ: ಸುರ್ಜೇವಾಲಾ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಪೌರತ್ವ (ತಿದ್ದುಪ‍ಡಿ) ಕಾಯ್ದೆಯನ್ನು ವಿರೋಧಿಸುತ್ತಿರುವ ರಾಜ್ಯಗಳ ಮೇಲೆ ಕೇಂದ್ರ ಸರ್ಕಾರವು ಕಡ್ಡಾಯವಾಗಿ ಜಾರಿಗೊಳಿಸುವಂತೆ ಒತ್ತಡ ಹೇರುವಂತಿಲ್ಲ ಎಂದು ಕಾಂಗ್ರೆಸ್‌ ಹೇಳಿದೆ. 

ಕಾಯ್ದೆಯು ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿದೆ. ಕಾಯ್ದೆ ವಿರುದ್ಧ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳು ಸುಪ್ರೀಂ ಕೋರ್ಟ್‌ನ ಅಂಗಳದಲ್ಲಿವೆ. ಸುಪ್ರೀಂ ವಿಚಾರಣೆ ನಡೆಸಿ ತೀರ್ಪು ನೀಡುವವರೆಗೆ ಕೇಂದ್ರವು ರಾಜ್ಯಗಳ ಮೇಲೆ ಒತ್ತಡ ಹೇರಬಾರದು ಎಂದು ಕಾಂಗ್ರೆಸ್‌ ವಕ್ತಾರ ರಣ್‌ದೀಪ್‌ ಸುರ್ಜೇವಾಲಾ ಭಾನುವಾರ ಆಗ್ರಹಿಸಿದ್ದಾರೆ. 

ಕಾಯ್ದೆಯು ಸಂವಿಧಾನದ ಮೇಲೆ ನಡೆಸಿದ ದಾಳಿಯಾಗಿದೆ. ಇದರ ವಿರುದ್ಧ ದೇಶದ ಜನರು ಬೀದಿಗಿಳಿದಿದ್ದಾರೆ. ಚಳವಳಿ, ಹೋರಾಟಗಳು ಮುಂದುವರಿಯಲಿವೆ ಎಂದು ಅವರು ಹೇಳಿದ್ದಾರೆ. 

ಇತ್ತೀಚೆಗೆ ಕಾಂಗ್ರೆಸ್‌ ಮುಖಂಡ ಕಪಿಲ್‌ ಸಿಬಲ್‌ ಅವರು, ಪೌರತ್ವ (ತಿದ್ದುಪಡಿ) ಕಾಯ್ದೆ ಜಾರಿಗೊಳಿಸಲು ಯಾವ ರಾಜ್ಯವು ಹಿಂದೇಟು ಹಾಕುವಂತಿಲ್ಲ. ಸಂವಿಧಾನ ಬದ್ಧವಾಗಿಯೇ ಸಂಸತ್‌ನಲ್ಲಿ ಅನುಮೋದನೆಗೊಂಡಿದ್ದು, ಅದರ ಜಾರಿಗೆ ವಿರೋಧಿಸುವಂತಿಲ್ಲ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಸುರ್ಜೇವಾಲಾ ಹೇಳಿಕೆ ಮಹತ್ವ ಪಡೆದಿದೆ.  

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು