ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭಯೋತ್ಪಾದನೆ ಪ್ರಾಯೋಜಕರ ವಿರುದ್ಧ ಕಠಿಣ ಕ್ರಮ: ಬಿಪಿನ್‌ ರಾವತ್‌

ರೈಸಿನಾ ಸಂವಾದ ಕಾರ್ಯಕ್ರಮದಲ್ಲಿ ಭಾಗಿ
Last Updated 16 ಜನವರಿ 2020, 20:00 IST
ಅಕ್ಷರ ಗಾತ್ರ

ನವದೆಹಲಿ: ಭಯೋತ್ಪಾದನೆಯನ್ನು ಪ್ರಾಯೋಜಿಸುವ ರಾಷ್ಟ್ರಗಳ ವಿರುದ್ಧ ಜಾಗತಿಕ ಮಟ್ಟದಲ್ಲಿ ಕಠಿಣ ಕ್ರಮ ಕೈಗೊಳ್ಳುವ ಅಗತ್ಯ ಇದೆ ಎಂದು ರಕ್ಷಣಾ ಪಡೆಗಳ ಮುಖ್ಯಸ್ಥ ಜನರಲ್‌ ಬಿಪಿನ್‌ ರಾವತ್‌ ಗುರುವಾರ ಅಭಿಪ್ರಾಯಪಟ್ಟಿದ್ದಾರೆ.

ರೈಸಿನಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘9/11ರ ದಾಳಿಯ ಬಳಿಕ ಭಯೋತ್ಪಾದಕ ಸಂಘಟನೆಗಳ ವಿರುದ್ಧ ಅಮೆರಿಕ ಕೈಗೊಂಡಂತಹ ಕಠಿಣ ಕ್ರಮಗಳನ್ನು ಅನುಸರಿಸಬೇಕಾದ ಅವಶ್ಯಕತೆ ಇದೆ’ ಎಂದೂ ಪ್ರತಿಪಾದಿಸಿದ್ದಾರೆ.

‘ಭಯೋತ್ಪಾದನೆ ಪ್ರಾಯೋಜಿಸುವ ರಾಷ್ಟ್ರಗಳು ಇರುವವರೆಗೂ ನಾವು ಭೀತಿ ಯಿಂದ ಬದುಕಬೇಕಾಗುತ್ತದೆ. ಅಂತಹ ದೇಶಗಳಿಗೆ ತಕ್ಕ ಪ್ರತ್ಯುತ್ತರ ನೀಡುವ ಅಗತ್ಯ ಇದೆ’ ಎಂದು ಪರೋಕ್ಷವಾಗಿ ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT