ದೆಹಲಿಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

7

ದೆಹಲಿಯಲ್ಲಿ 2ನೇ ತರಗತಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

Published:
Updated:

ನವದೆಹಲಿ: ಇಲ್ಲಿನ ಗೋಲ್‌ ಮಾರುಕಟ್ಟೆ ಪ್ರದೇಶದಲ್ಲಿರುವ ನವದೆಹಲಿ ಮುನ್ಸಿಪಲ್‌ ಕೌನ್ಸಿಲ್‌ನ  (ಎನ್‌ಡಿಎಂಸಿ) ಶಾಲೆಯಲ್ಲಿ ಎರಡನೇ ತರಗತಿಯ ವಿದ್ಯಾರ್ಥಿನಿ ಮೇಲೆ ಇದೇ ಶಾಲೆಯ ಎಲೆಕ್ಟ್ರೀಷಿಯನ್‌ ಅತ್ಯಾಚಾರ ನಡೆಸಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಆರೋಪಿ ರಾಮ್ ಆರ್ಸೆ (37) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಶಾಲಾ ಅವಧಿ ಮುಗಿದ ನಂತರ ಬಾಲಕಿಯನ್ನು ಶಾಲೆಯ ಆವರಣದಲ್ಲಿನ ಪಂಪ್‌ ಕೋಣೆಗೆ ಬಲವಂತವಾಗಿ ಕರೆದುಕೊಂಡು ಹೋಗಿ ಅತ್ಯಾಚಾರ ನಡೆಸಿದ್ದಾನೆ. ಈ ಬಗ್ಗೆ ಯಾರಿಗೂ ಹೇಳದಂತೆ ಬಾಲಕಿಗೆ ಬೆದರಿಕೆ ಹಾಕಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಲೆಯ ಮುಖ್ಯಶಿಕ್ಷಕಿ ಸೇರಿದಂತೆ ನಾಲ್ವರು ಅಧಿಕಾರಿಗಳನ್ನು ಎನ್‌ಡಿಎಂಸಿ ಅಮಾನತುಗೊಳಿಸಿದೆ.

ಬಾಲಕಿ ಮನೆಗೆ ಹೋದ ನಂತರ ರಕ್ತಸ್ರಾವ ಆಗುತ್ತಿರುವುದನ್ನು ಕಂಡ ಬಾಲಕಿಯ ತಾಯಿ, ಸಮೀಪದ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಬಾಲಕಿ ಮೇಲೆ ಅತ್ಯಾಚಾರ ನಡೆದಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಗುರುವಾರ ಪೊಲೀಸ್‌ ಠಾಣೆಗೆ ತೆರಳಿದ ಪೋಷಕರು, ದೂರು ದಾಖಲಿಸಿದ್ದಾರೆ. ಆರೋಪಿ ವಿರುದ್ಧ ಪೋಕ್ಸೊ ಕಾಯ್ದೆ ಅಡಿ ಪ್ರಕರಣ ದಾಖಲಾಗಿದೆ.

 ನೋಟಿಸ್‌ ಜಾರಿ: ಪೊಲೀಸರಿಗೆ ಹಾಗೂ ಶಾಲಾ ಆಡಳಿತ ಮಂಡಳಿಗೆ ದೆಹಲಿ ಮಹಿಳಾ ಆಯೋಗವು ನೋಟಿಸ್‌ ನೀಡಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 1

  Angry

Comments:

0 comments

Write the first review for this !