ಶನಿವಾರ, ಫೆಬ್ರವರಿ 29, 2020
19 °C

ಸುಭಾಷ್ ಚಂದ್ರ ಬೋಸ್‌ ಜಯಂತಿ| ಜಾರ್ಖಂಡ್‌ನಲ್ಲಿ ಸಾರ್ವತ್ರಿಕ ರಜೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಬೆಂಗಳೂರು: ‘ನೀವು ನನಗೆ ರಕ್ತ ಕೊಡಿ, ನಾನು ನಿಮಗೆ ಸ್ವಾತಂತ್ರ್ಯ ಕೊಡುತ್ತೇನೆ’ ಎನ್ನುವ ಕ್ರಾಂತಿಕಾರಿ ಘೋಷಣೆ ಮೊಳಗಿಸಿದ್ದ ನೇತಾಜಿ ಸುಭಾಷ್‌ ಚಂದ್ರ ಬೋಸ್ ಅವರ 123ನೇ ಜಯಂತಿ ಪ್ರಯುಕ್ತ ಜಾರ್ಖಾಂಡ್‌ ಸರ್ಕಾರ ಸಾರ್ವತ್ರಿಕ ರಜೆ ನೀಡಲು ನಿರ್ಧರಿಸಿದೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಜಾರ್ಖಂಡ್‌ ಮುಖ್ಯಮಂತ್ರಿ ಹೇಮಂತ್‌ ಸೋರೆನ್‌, ‘ಜಗತ್ತು ಕಂಡ ಮಹಾನ್ ಸ್ವಾತಂತ್ರ್ಯ ಯೋಧ ನೇತಾಜಿ ಜನ್ಮದಿನದಂದು ಸರ್ಕಾರಿ ರಜೆ ಘೋಷಿಸುವ ನಿರ್ಣಯ ಕೈಗೊಳ್ಳಲಾಗಿದೆ’ ಎಂದು ಹೇಳಿದ್ದಾರೆ.

‘ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ ಕರ್ಮಭೂಮಿ ಜಾರ್ಖಂಡ್ ಆಗಿದ್ದು, ಅವರ ತತ್ವಾದರ್ಶಗಳನ್ನು ಯುವ ಪೀಳಿಗೆಗೆ ತಲುಪಿಸುವುದು ಸರ್ಕಾರದ ಕರ್ತವ್ಯ’ ಎಂದು ಟ್ವೀಟ್‌ನಲ್ಲಿ ಬರೆದುಕೊಂಡಿದ್ದಾರೆ.

ಗಣ್ಯರ ಸ್ಮರಣೆ

ಸುಭಾಷ್‌ ಚಂದ್ರ ಬೋಸ್‌ ಅವರ ಜನ್ಮ ದಿನಾಚರಣೆ ಪ್ರಯುಕ್ತ ವಿವಿಧ ಗಣ್ಯರು ಸಾಮಾಜಿಕ ಜಾಲತಾಣಗಳಲ್ಲಿ ಸ್ಮರಿಸಿ ಪೋಸ್ಟ್‌ ಹಾಕಿದ್ದಾರೆ. 

 

ಪ್ರಧಾನಿ ನರೇಂದ್ರ ಮೋದಿ ಅವರು ಟ್ವೀಟ್‌ ಮೂಲಕ ಅವರನ್ನು ಸ್ಮರಿಸಿದ್ದು, ‘ಸುಭಾಷ್‌ ಚಂದ್ರ ಬೋಸ್‌ ಅವರ ಧೈರ್ಯ ಮತ್ತು ಸ್ವಾತಂತ್ರ್ಯಕ್ಕಾಗಿ ಅವರು ನೀಡಿದ ಕೊಡುಗೆಗೆ ಭಾರತ ಅವರಿಗೆ ಸದಾ ಕೃತಜ್ಞರಾಗಿರುತ್ತದೆ. ಭಾರತೀಯರ ಪ್ರಗತಿ ಮತ್ತು ಅವರ ಉತ್ತಮ ಬದುಕಿಗಾಗಿ ಹೋರಾಡಿದವರು ಎಂದು ಹೇಳಿದ್ದಾರೆ. 

Image credit: @MayonTweets

ಕರ್ನಾಟಕ ಮುಖ್ಯಮಂತ್ರಿ ಯಡಿಯೂರಪ್ಪ, ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌, ಗುಜರಾತ್‌ ಮುಖ್ಯಮಂತ್ರಿ ವಿಜಯ್‌ ರೂಪಾನಿ ಸೇರಿ ಬಹುತೇಕ ರಾಜ್ಯಗಳ ಮುಖ್ಯಮಂತ್ರಿಗಳು ಬೋಸ್‌ ಅವರ ಸ್ವಾತಂತ್ರ್ಯ ಹೋರಾಟದ ಹಾದಿ, ದೇಶಕ್ಕಾಗಿ ನೀಡಿದ ಕೊಡುಗೆಗಳನ್ನು ಸ್ಮರಿಸಿ ಟ್ಟಿಟ್ಟರ್‌ನಲ್ಲಿ ಪೋಸ್ಟ್‌ಗಳನ್ನು ಪ್ರಕಟಿಸಿದ್ದಾರೆ.

Image credit: @dixit7shubham

ಬೋಸ್‌ ಜನ್ಮದಿನದ ಪ್ರಯುಕ್ತ ಅನೇಕರು ಅವರನ್ನು ಸ್ಮರಿಸಿದ್ದು ಟ್ವಿಟ್ಟರ್‌ನಲ್ಲಿ #NetajiJayanti #subhashchandrabose, #NetajiSubhasChandraBose ಎಂಬ ಹ್ಯಾಷ್‌ಟ್ಯಾಗ್‌ಗಳು ಟ್ರೆಂಡ್‌ ಆಗಿವೆ. ಸುಮಾರು 25 ಸಾವಿರ ಮಂದಿ ಈ ಹ್ಯಾಷ್‌ಟ್ಯಾಗ್‌ಗಳನ್ನು ಬಳಸಿ ಟ್ವೀಟ್‌ ಮಾಡಿದ್ದಾರೆ.

Image credit: @pokershash

 

Image credit: twitter.com/TAlokKumar

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು